ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದೀಪಕ್ ರಾವ್ ಹತ್ಯೆಯ ದಿನದಂದೇ ದುಷ್ಕರ್ಮಿಗಳ ದಾಳಿಗೆ ತುತ್ತಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಬಶೀರ್‍ರನ್ನು ನೋಡಲು ಸಚಿವ ಯುಟಿ ಖಾದರ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಶೀರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಯುಟಿ ಖಾದರ್ ಮಾಹಿತಿ ಪಡೆದುಕೊಂಡಿದ್ದಾರೆ. ಬಶೀರ್ ಕುಟುಂಬಸ್ಥರಿಗೆ ಯು.ಟಿ.ಖಾದರ್ ಸಾಂತ್ವನವನ್ನು ಹೇಳಿದ್ದು, ಸರ್ಕಾರದಿಂದ ಚಿಕಿತ್ಸೆಯ ವೆಚ್ಚ ಭರಿಸಲು ಸಹಕರಿಸೋದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ದೀಪಕ್ ಹತ್ಯೆ ನಡೆದ ರಾತ್ರಿ ಮಂಗ್ಳೂರಿನಲ್ಲಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ
Advertisement
Advertisement
ಸದ್ಯ ಬಶೀರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಗಂಟಲು ತಲೆ ಮತ್ತು ಎದೆಯ ಕೆಳಭಾಗಗಕ್ಕೆ ತೀವ್ರ ಪೆಟ್ಟಾಗಿದೆ. ಹೀಗಾಗಿ ದೇಹದ ಕೆಲ ಭಾಗಗಳು ನಿಷ್ಕ್ರಿಯಗೊಂಡಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
Advertisement
ಜನವರಿ 3ರಂದು ಕೊಟ್ಟಾರ ಚೌಕಿಯಲ್ಲಿರುವ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ಹೊರಡುವ ಸಂದರ್ಭದಲ್ಲಿ 3 ಬೈಕ್ ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ಬಶೀರ್ ಮೇಲೆ ತಲ್ವಾರ್ ನಿಂದ ಮನಬಂದಂತೆ ದಾಳಿ ನಡೆಸಿದ್ದರು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement
https://www.youtube.com/watch?v=prf8LAzRcus
https://www.youtube.com/watch?v=XIln_78eJlQ
https://www.youtube.com/watch?v=nqZ3ZShX1q0