– ರಾಜ್ಯದಲ್ಲಿ 4,047 ಕೋಟಿ ರೂ. ಬರ ಪರಿಹಾರ ಕೊಟ್ಟಿದ್ದೇವೆ ಎಂದ ಸಚಿವ
ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಬರ ಪರಿಹಾರವಾಗಿ (Drought Relief) 4,047 ಕೋಟಿ ರೂ. ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಛಲವಾದಿ ನಾರಾಯಣಸ್ವಾಮಿ ಬದಲಾಗಿ, ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಪ್ರಶ್ನೆ ಕೇಳಿದ್ರು.
ಸರ್ಕಾರ ಎಲ್ಲಾ ರೈತರಿಗೆ ಬರ ಪರಿಹಾರ ಇನ್ನೂ ಬಿಡುಗಡೆ ಮಾಡಿಲ್ಲ. ಕೇಂದ್ರದಿಂದ ಪರಿಹಾರ ಬಿಡುಗಡೆ ಆಗಿದೆ. ಆದರೂ ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ. ಬೆಳೆ ವಿಮೆ ಪರಿಹಾರ ಕೂಡ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ (Karnataka Govt) ಬರ ಪರಿಹಾರ ನೀಡಬೇಕು ಒತ್ತಾಯಿಸಿದರು. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ
ಇದಕ್ಕೆ ಸಚಿವ ಕೃಷ್ಣಬೈರೇಗೌಡ ಉತ್ತರ ನೀಡಿ, ನಮ್ಮ ಸರ್ಕಾರ 38,78,525 ರೈತರಿಗೆ (Farmers) ಬರ ಪರಿಹಾರ ಕೊಟ್ಟಿದೆ. 3,535.30 ಕೋಟಿ ರೂ.ಗಳನ್ನ ಅರ್ಹ ರೈತಗೆ ಪರಿಹಾರ ನೀಡಲಾಗಿದೆ. ಡಿಜಿಟಲ್ ಸರ್ವೆ ಮೂಲಕ ಹಾನಿಯಾದ ರೈತರಿಗೆ ಪರಿಹಾರ ಕೊಡಲಾಗಿದೆ. ಶೇ.33 ಕ್ಕಿಂತ ಹೆಚ್ಚು ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲಾಗಿದೆ. ನಾಲೆಯಲ್ಲಿ ನೀರು ಹರಿಸಲು ಆಗದ ರೈತರಿಗೂ ಪರಿಹಾರ ಕೊಡಲಾಗಿದೆ. ಜೀವನೋಪಾಯಕ್ಕಾಗಿ 531 ಕೋಟಿ ರೂ.ಗಳನ್ನ 17 ಲಕ್ಷ ರೈತರಿಗೆ ಪಾವತಿ ಮಾಡ್ತಿದ್ದೇವೆ. 4,047 ಕೋಟಿ ರೂ. ಒಟ್ಟು ಪರಿಹಾರ ನೀಡಿದ್ದೇವೆ ಅಂತ ತಿಳಿಸಿದರು. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೇ ಇದ್ದಾಗ 1,296 ಕೋಟಿ ರೂ. ರಾಜ್ಯ ಸರ್ಕಾರದಿಂದ ಮೊದಲೇ ಬರ ಪರಿಹಾರ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಡಿರಲಿಲ್ಲ. ನಾವು ಸುಪ್ರೀಂ ಕೋರ್ಟ್‌ಗೆ ಹೋಗದೇ ಇದ್ದಿದ್ದರೇ ನಮಗೆ ಕೇಂದ್ರ ಪರಿಹಾರ ಕೊಡುತ್ತಿರಲಿಲ್ಲ. ಸುಪ್ರೀಂ ಕೋರ್ಟ್ ನಿಂದ ನಾವು ಪರಿಹಾರ ಪಡೆದಿದ್ದೇವೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: Nepal Plane Crash; ಟೇಕಾಫ್ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು