ಶಿವಮೊಗ್ಗದ: ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
Advertisement
ಶಿವಮೊಗ್ಗದಲ್ಲಿ ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ
Advertisement
Advertisement
ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ
Advertisement
ಮೃತ ವ್ಯಕ್ತಿ ತುಂಬಾ ಪ್ರಾಮಾಣಿಕ ಕಾರ್ಯಕರ್ತನಾಗಿದ್ದನು. ಆತನ ಕೊಲೆ ತುಂಬಾ ನೋವು ತಂದಿದೆ. ಶಿವಮೊಗ್ಗದಲ್ಲಿ ಈ ಗೂಂಡಾಗಿರಿ ಬೆಳೆಯಲು ಬಿಡುವುದಿಲ್ಲ. ದಮನ ಮಾಡುತ್ತೇವೆ. ಇದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.