ಕಲಬುರಗಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಡೆತ್ ಮೆಸೇಜ್ ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರಿಂದ ನೇಮಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮಗಳೊಂದಿಗೆ ನಾತನಾಡಿದ ಅವರು, ಗುತ್ತಿಗೆದಾರರು ಈ ಮುಂಚೆ ಸರ್ಕಾರ 40% ಕಮಿಷನ್ ಬೇಡಿಕೆ ಇಟ್ಟಿದೆ. ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆದರೂ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ. ಈಗ ಒಂದು ಜೀವ ಹೋಗಿದೆ ಇದಕ್ಕಿಂತ ಪ್ರೂಫ್ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಬೊಮ್ಮಾಯಿ
Advertisement
Advertisement
40% ಪರ್ಸೆಂಟ್ ಕಮಿಷನ್ ಬಗ್ಗೆ ಈ ಹಿಂದೆ ಅನೇಕ ಬಾರಿ ಸಂತೋಷ್ ಹೇಳಿದ್ದರು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರಲಿಲ್ಲ. ನಾ ಖಾವುಂಗ..ಖಾನೇ ದೂಂಗಾ ಎಂದು ಪ್ರಧಾನಿ ಹೇಳಿದ್ದರು. ಆದರೆ ಸರ್ಕಾರದಲ್ಲಿ ಎಲ್ಲವೂ ನಡೆಯುತ್ತಿದೆ. ಈ ವಿಷಯವನ್ನು ಬೆಳಗಾವಿ-ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆವು. ಆದರೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮಹತ್ರ ಪ್ರೂಫ್ ಇದೆಯಾ ಅಂತಾ ಕೇಳಿದ್ದರು ಎಂದು ನೆನಪಿಸಿಕೊಂಡರು.
Advertisement
ಸಿಎಂ ಬಸವರಾಜ ಬೊಮ್ಮಾಯಿ ಆರ್‍ಎಸ್‍ಎಸ್ ಕೈಗೊಂಬೆಯಾಗಿದ್ದು ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಸಿಎಂ, ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಜಿಪಿ ಬದುಕಿದ್ದರೆ, ಕ್ರಮ ಕೈಗೊಳ್ಳಬೇಕು: ಡಿಕೆಶಿ
ಸಂತೋಷ್ ಪಾಟೀಲ್ ಡೆತ್ ಮೆಸೇಜ್ ನಲ್ಲಿ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಉಲ್ಲೇಖಿಸಿರುವುದರಿಂದ ಆತ್ಮಹತ್ಯೆಗೆ ಪ್ರೇರಣೆ ಎಂದು ಕೇಸು ದಾಖಲಿಸಬೇಕು. ಜೊತೆಗೆ ನ್ಯಾಯಾಧೀಶರಿಂದ ಸಮಗ್ರ ತನಿಖೆವಾಗುವರೆಗೆ ಈಶ್ವರಪ್ಪನವರನ್ನ ವಜಾಗೊಳಿಸಬೇಕು ಎಂದು ಪುನರುಚ್ಛರಿಸಿದರು.