ಉಡುಪಿ: ಕಾಂಗ್ರೆಸ್ ಕಮಿಷನ್ ತಂದೆಯ ಬಗ್ಗೆ ಬಿಜೆಪಿ ಆರೋಪ ಶುರು ಮಾಡಿದೆ. ಪೇ ಸಿಎಂ ಕಮಿಷನ್ ಕಾಂಗ್ರೆಸ್ಸಿಗೆ ತಿರುಗುಬಾಣವಾಗಿದೆ. ಕೃಷಿ ಸಚಿವರ ಮೇಲೆ ಕಮಿಷನ್ ಆರೋಪ ಇದ್ದು ಸಿಐಡಿ (CID) ತನಿಖೆ ಮಾಡುತ್ತಿದೆ. ಬಿಜೆಪಿಯ (BJP) ಈ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಉಡುಪಿಯಲ್ಲಿ (Usupi) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಹೊಸ ಯೋಜನೆಗಳನ್ನು ಮಾಡಿದರೆ ಮಾತ್ರ ಕಮಿಷನ್ ವಿಚಾರ ಬರುತ್ತದೆ. ಹೊಸ ಗುದ್ದಲಿ ಪೂಜೆ ಟೆಂಡರ್ ಆದರೆ ಕಮಿಷನ್ ವಿಚಾರ ಬರುತ್ತದೆ. ಆನ್ ಗೋಯಿಂಗ್ ಕಾಮಗಾರಿಗಳು ನಡೆಯುತ್ತಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರುತ್ತದೆ? ಹೇಗೆ ಬರುತ್ತದೆ ಎಂದು ಪ್ರಶ್ನಿಸಿದರು.
ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳು ಇಲ್ಲ. ಬಿಬಿಎಂಪಿ ವಿಚಾರದಲ್ಲಿ ಬಂದಿರುವ ಆರೋಪ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಮುಖ್ಯಮಂತ್ರಿಗಳೇ ಈ ಬಗ್ಗೆ ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಬೋಗಸ್ ಬಿಲ್ ಆಗಿದೆಯಾ ಎಂದು ತನಿಖಾ ತಂಡ ವಿಚಾರಣೆ ಮಾಡುತ್ತದೆ ಎಂದು ಹೆಬ್ಬಾಳ್ಕರ್ ಹೇಳಿದರು.
Web Stories