ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ: ಮಧು ಬಂಗಾರಪ್ಪ

Public TV
1 Min Read
madhu bangarappa 1

ಶಿವಮೊಗ್ಗ: ಬೆಂಗಳೂರಿನ ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಬೆದರಿಕೆ ಬಗ್ಗೆ ಮಾಧ್ಯಮದಲ್ಲಿ ತೋರಿಸುತ್ತಿದ್ದೀರಿ. ಅದು ಸ್ವಲ್ಪ ಹೋಪ್ಸ್ ತರ ಕಾಣುತ್ತಿದೆ. ಯಾವುದನ್ನು ಹಗುರವಾಗಿ ತೆಗೆದುಕೊಳ್ಳುವ ಹಾಗೆ ಇಲ್ಲ. ಇದು ಮಕ್ಕಳ ವಿಚಾರ. ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ ಎಂದರು.

ಬೆದರಿಕೆ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ. ಪೋಷಕರಿಗೆ ಬಹಳ ಆತಂಕ ಇರುತ್ತದೆ. ಯಾರು ಹೆದರುವುದು ಬೇಡ ಧೈರ್ಯವಾಗಿರಿ ಎಂದು ಸಚಿವರು ತಿಳಿಸಿದ್ದಾರೆ.

SCHOOL THREAT

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಗರದ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಖಾರಿಜೈಟ್ಸ್ ಎಂಬ ಮೂಲಭೂತವಾದಿ ಸಂಘಟನೆ ಹೆಸರಲ್ಲಿ ಬಂದ ಇ-ಮೇಲ್ ಬಂದಿದೆ. ಇ-ಮೇಲ್‍ನಲ್ಲಿ ‘ನಿಮ್ಮನ್ನು ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ. ತಾಜ್ ಮೇಲೆ ದಾಳಿ ಮಾಡಿದಂತೆ ದಾಳಿ ಮಾಡುತ್ತೇವೆ . ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ’ ಎಂದು ಕೆಂಗೇರಿಯ ಚಿತ್ರಕೂಟ ಶಾಲೆಗೆ ಬಂದ ಈ-ಮೇಲ್‍ನಲ್ಲಿ ಬೆದರಿಕೆ ಹಾಕಲಾಗಿದೆ.


ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸದ್ಯ ಎಲ್ಲಾ ಶಾಲೆಗಳಿಲ್ಲಿಯೂ ಬಾಂಬ್ ನಿಷ್ಕ್ರೀಯದ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆ ಬಳಿ ಓಡೋಡಿ ಬಂದಿದ್ದಾರೆ. ಅಲ್ಲದೇ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

Share This Article