ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ (Government Schools) 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.
ಕೊಡಗಿನ (Kodagu) ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಸಾರಿಗೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಆರ್‌ಎಸ್‌ಎಸ್ ಯಾಕೆ ನೋಂದಣಿಯಾಗಿಲ್ಲ? ಸಂಘಕ್ಕೆ ಮುಸ್ಲಿಮರನ್ನು ಸೇರಿಸಿಕೊಳ್ಳಲು ಅವಕಾಶ ಇದ್ಯಾ? ಪ್ರಶ್ನೆಗೆ ಉತ್ತರ ನೀಡಿದ ಮೋಹನ್ ಭಾಗವತ್
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೂ ಗಮನ ಹರಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. ಸಂಜೆ ವೇಳೆಯಲ್ಲಿ ವಿಶೇಷ ತರಗತಿ ನಡೆಸಿ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ. ಒಟ್ಟಾರೆ ಸರ್ಕಾರಿ ಶಾಲೆಗಳ ಸುಧಾರಣೆ ಮತ್ತು ಬೆಳವಣಿಗೆಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ ಎಂದು ನುಡಿದರು.
ರಾಜ್ಯದಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು, 57 ಸಾವಿರ ಅನುದಾನಿತ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ 12ನೇ ತರಗತಿ ವರೆಗೆ ಸುಮಾರು 1.16 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಶಿಕ್ಷಣದಿಂದ ಮಾತ್ರ ಸಾಧ್ಯ, ಆ ದಿಸೆಯಲ್ಲಿ ಸರ್ಕಾರ ಹಲವು ಸಮಸ್ಯೆಗಳ ನಡುವೆಯೂ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮರ್ಮಾಂಗಕ್ಕೆ ಒದ್ದು ಹಲ್ಲೆ, ಬಾಲಕನ ವೃಷಣಕ್ಕೆ ಗಂಭೀರ ಗಾಯ – ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ‍್ಯಾಗಿಂಗ್
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಸುಧಾರಿಸುವಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗದಂತೆ 3 ಪರೀಕ್ಷಾ ನೀತಿ ಜಾರಿಗೊಳಿಸಿ, 25 ದಿನಗಳ ಅಂತರದಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಅನುಕೂಲ ಮಾಡಲಾಗಿದೆ. ಆ ನಿಟ್ಟಿನಲ್ಲಿ ಈ ವರ್ಷ 1.16 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿನದ್ದಾಗಿದೆ, ಆ ದಿಸೆಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ವಿದೇಶದಲ್ಲಿ ಹರಿಯಾಣ ಪೊಲೀಸರ ಕಾರ್ಯಾಚರಣೆ – ಬಿಷ್ಣೋಯ್ ಗ್ಯಾಂಗ್ ಸಂಪರ್ಕದಲ್ಲಿದ್ದ ದರೋಡೆಕೋರರು ಅರೆಸ್ಟ್

