ತುಮಕೂರು: ಸಚಿವ ಮಾಧುಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತನ್ನ ಬೆಂಗಾವಲು ವಾಹನದಲ್ಲಿ ಸಾಗಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
Advertisement
ಶಿರಾ ತಾಲೂಕಿನ ಅಮರಾಪುರ ರಸ್ತೆಯ ಹುಚ್ಚಗೀರನಹಳ್ಳಿ ಗೇಟ್ ಬಳಿ ಟಿವಿಎಸ್ ಮೊಪೆಡ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿತ್ತು. ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಯೊಂಡಿದ್ದರು. ಈ ವೇಳೆ ಇದೇ ಮಾರ್ಗದಲ್ಲಿ ಸರ್ಕಾರಿ ಕಾರ್ಯಕ್ರಮ ನಿಮಿತ್ತ ಹೋಗುತ್ತಿದ್ದ ಸಚಿವ ಮಾಧುಸ್ವಾಮಿ ಹಾಗೂ ಶಾಸಕರು ಚಿಕ್ಕಬಾಣಗೆರೆಗೆ ಹೋಗುತ್ತಿದ್ದರು.
Advertisement
Advertisement
ಈ ವೇಳೆ ಗಾಯಾಳುವನ್ನು ಗಮನಿಸಿದ ಸಚಿವರು, ತಕ್ಷಣ ಕಾರು ನಿಲ್ಲಿಸಿ ಗಾಯಗೊಂಡವರ ನೆರವಿಗೆ ಧಾವಿಸಿದ್ದಾರೆ. ಸ್ವತಃ ತಾವೇ 108ಗೆ ಕಾಲ್ ಮಾಡಿ ಬೇಗ ವಾಹನ ಕಳಿಸುವಂತೆ ತಾಕೀತು ಮಾಡಿದರು. ಸಚಿವರು ಕಾಲ್ ಮಾಡಿದ್ರೂ 108 ವಾಹನ ಸಮಯಕ್ಕೆ ಸರಿಯಾಗಿ ಬಂದಿರಲಿಲ್ಲ. ವಿಧಿ ಇಲ್ಲದೇ ಸಚಿವರು ಕೊನೆಗೆ ತಮ್ಮ ಬೆಂಗಾವಲು ವಾಹನದಲ್ಲಿ ಶಿರಾ ಆಸ್ಪತ್ರೆಗೆ ಗಾಯಾಳುಗಳನ್ನು ಕಳುಹಿಸಿಕೊಟ್ಟರು. ಇದನ್ನೂ ಓದಿ: ರಾಜ್ಯದ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ಪ್ರಧಾನಿಯಿಂದ ಪ್ರಶಸ್ತಿ ಪ್ರದಾನ
Advertisement
ಸಚಿವ ಮಾಧುಸ್ವಾಮಿಗೆ ಶಿರಾ ಶಾಸಕ ರಾಜೇಶ್ ಗೌಡ, ಎಮ್ ಎಲ್ ಸಿ ಚಿದಾನಂದ ಗೌಡ ಸಾಥ್ ನಿಡಿದರು. ಜನಪ್ರತಿನಿಧಿಗಳ ಈ ಕಾರ್ಯಕ್ಕೆ ಪ್ರತ್ಯಕ್ಷದರ್ಶಿಗಳ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನಗೆ ಸಚಿವ ಸ್ಥಾನಕ್ಕಿಂತ ಪಕ್ಷದ ಸಂಘಟನೆ ಹೆಚ್ಚು ಖುಷಿ ನೀಡುತ್ತದೆ: ಕೆ.ಎಸ್ ಈಶ್ವರಪ್ಪ