‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಸಚಿವ ಮಹದೇವಪ್ಪ

Public TV
2 Min Read
Gangster Alla Frankster 2

ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಉಗ್ರಂ ಖ್ಯಾತಿಯ ತಿಲಕ್ ಶೇಖರ್ (Tilak Shekhar) ನಾಯಕರಾಗಿ ನಟಿಸಿರುವ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ (Gangster Alla Frankster) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್.ಸಿ. ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್.ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್, ಆನಂದ್ ಆಡಿಯೋ ಶ್ಯಾಮ್ ಅವರು ಸಹ ಸಮಾರಂಭಕ್ಕೆ ಆಗಮಿಸಿ ಯಶಸ್ಸನ್ನು ಹಾರೈಸಿದರು.

Gangster Alla Frankster 3

ಈ ಹಿಂದೆ ನಾನು ಭಾವಚಿತ್ರ ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಮೂರನೇ ಚಿತ್ರ. ನಿರ್ದೇಶನದೊಂದಿಗೆ ನಟನೆ ಕೂಡ ಮಾಡಿದ್ದೇನೆ.‌ ತಿಲಕ್ ಅವರು ಗ್ಯಾಂಗ್ ಸ್ಟರ್ ಆಗಿ, ನಾನು   ಫ್ರಾಂಕ್ ಸ್ಟರ್ ಆಗಿ ನಟಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇದು ಯೂಟ್ಯೂಬರ್ ಒಬ್ಬನ ಕಥೆಯಾಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸಚಿವರಿಗೆ ಹಾಗೂ ಗಣ್ಯರಿಗೆ ನನ್ನ ಧನ್ಯವಾದ ಎಂದರು ನಿರ್ದೇಶಕ ಹಾಗೂ ನಟ ಗಿರೀಶ್ ಕುಮಾರ್. ಇದನ್ನೂ ಓದಿ:Breaking- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ಚಾರ್ಲಿ 777 ಅತ್ಯುತ್ತಮ ಪ್ರಾದೇಶಿಕ ಚಿತ್ರ

Gangster Alla Frankster 1

ನಾನು ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಂಡಿದ್ದೇನೆ. ಗಿರೀಶ್ ಕುಮಾರ್ (Girish Kumar) ಒಳ್ಳೆಯ ಕಥೆ ಮಾಡಿದ್ದಾರೆ. ಚಿತ್ರ ಜನರಿಗೆ ಹತ್ತಿರವಾಗಲಿದೆ ಎಂದು ನಾಯಕ ತಿಲಕ್ ಶೇಖರ್ ತಿಳಿಸಿದರು.  ನಾನು ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಹಾಗೂ ಚಿತ್ರದ ಪ್ರಮುಖ ಪಾತ್ರದಲ್ಲೂ ಅಭಿನಯಿಸಿದ್ದೇನೆ.‌ ಚಿತ್ರದಲ್ಲಿ ನಾನು‌ ಸಹ ಗ್ಯಾಂಗ್ ಸ್ಟರ್ ಎಂದರು ಗಿರೀಶ್ ಬಿಜ್ಜಳ್.

ನಾಯಕಿ ವಿರಾನಿಕ ಶೆಟ್ಟಿ ಸೇರಿದಂತೆ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ.  ಅಜಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.   ತಿಲಕ್ , ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article