ಕಾರವಾರ: ಇನ್ಮುಂದೆ ಗೋಹತ್ಯೆ (Cow Slaughter) ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ (Mankal Vaidya) ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಮನೆಯಲ್ಲಿ ಪಿ.ರಾಜೀವ್ ಗುಪ್ತ ಮೀಟಿಂಗ್
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದ ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡ ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ವಾರದಲ್ಲಿ ಪಕ್ಷದ ಗೊಂದಲಗಳಿಗೆ ತೆರೆ – ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ ವಿಶ್ವಾಸ