– ಹೊಂಡದ ಕಡೆ ಹೋಗಿದ್ದರಿಂದ ದುರಂತ ಸಂಭವಿಸಿದೆ
– ಸಾವಿನ ಸಂಖ್ಯೆ 9ಕ್ಕೆ ಏರಿಕೆ, ಇಬ್ಬರು ಮಿಸ್ಸಿಂಗ್
ಕಾರವಾರ: ಭಟ್ಕಳದಲ್ಲಿ ಇದೇ ಮೊದಲಬಾರಿಗೆ ಇಷ್ಟು ದೊಡ್ಡ ದುರಂತ ನಡೆದಿದೆ. ಕಪ್ಪೆಚಿಪ್ಪು (Seashell) ತೆಗೆಯಲು ಹೋದವರು ಹೊಂಡದ ಕಡೆ ಹೋಗಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಸಚಿವ ಮಂಕಾಳ ಎಸ್ ವೈದ್ಯ (Mankala Vaidya) ತಿಳಿಸಿದ್ದಾರೆ.
ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ (Bhatkal River) ಕಪ್ಪೆಚಿಪ್ಪು ತೆಗೆಯಲು ಹೋಗಿ ಮೃತಪಟ್ಟವರ ಸಂಖ್ಯೆ ಈಗ 9ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಸಚಿವರು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದೇನೆ. 13 ಜನ ನದಿಗೆ ಇಳಿದಿದ್ದರು, ಅದರಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ, ಇಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೃತರೆಲ್ಲರು ಒಂದೇ ಕುಟುಂಬದವರಲ್ಲ, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹೊಂಡದ ಕಡೆಗೆ ಹೋಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಅನಾಹುತ ಸಂಭವಿಸಿದೆ. ಸ್ಥಳಕ್ಕೆ ಡಿಸಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಸಾವು 9ಕ್ಕೆ ಏರಿಕೆ; ಇಬ್ಬರು ಮಿಸ್ಸಿಂಗ್
ಇನ್ನೂ ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇನ್ನೂ ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸುನೀಲ್ ನಾಯ್ಕ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
