ಮಡಿಕೇರಿ: ಮಳೆಗಾಗಿ ಪ್ರಾರ್ಥಿಸಿ ಜೀವ ನದಿ ತಲಕಾವೇರಿ ಸನ್ನಿಧಿಯಲ್ಲಿ ಪರ್ಜನ್ಯ ಜಪ ಆರಂಭವಾಗಿದೆ.
ವರುಣನ ಕೃಪೆಗಾಗಿ ಕಾವೇರಿ ಉಗಮಸ್ಥಾನ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಪರ್ಜನ್ಯ ಜಪ ಆಯೋಜನೆ ಮಾಡಿದ್ದ ಸಚಿವ ಎಂ.ಬಿ ಪಾಟೀಲ್ ವಿವಾದದಿಂದ ದೂರ ಉಳಿಯಲು ಎಂಜಿನಿಯರ್‍ಗಳ ಮೂಲಕ ಪರ್ಜನ್ಯ ಜಪ ಮಾಡಿಸಿದ್ರು.
Advertisement
Advertisement
ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಬಸವರಾಜ್, ಪತ್ನಿ ಜಯಶ್ರೀ ಜೊತೆಗೆ ಪರ್ಜನ್ಯ ಜಪ ನಡೆಸಿದರು. ಅರ್ಚಕರಾದ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಮುಂಜಾನೆ 9 ಗಂಟೆಯಿಂದ 11 ಗಂಟೆಯ ವರೆಗೆ ಪೂಜಾ ವಿಧಿ ವಿಧಾನಗಳು ನಡೆದವು.
Advertisement
ಸರ್ಕಾರದಿಂದ ಮಳೆಗಾಗಿ ಪೂಜೆ ಮಾಡುವುದಕ್ಕೆ ವಿರೋಧ ವ್ಯಕ್ತವಾದ್ದರಿಂದ ವೈಯಕ್ತಿಕವಾಗಿ ಪೂಜೆ ಮಾಡೋದಾಗಿ ಹೇಳಿದ್ದ ನೀರಾವರಿ ಸಚಿವ ಎಂ.ಬಿ.ಪಾಟಿಲ್ ತಲಕಾವೇರಿ-ಭಾಗಮಂಡಲ ಕ್ಷೇತ್ರಕ್ಕೆ ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಿಸಿದ್ರು. ಸಚಿವರಿಗೆ ಕಲಾ ತಂಡಗಳ ಅದ್ದೂರಿ ಸ್ವಾಗತ ಸಿಕ್ತು.
Advertisement