– ಹಾದಿಯಲ್ಲಿ ಹೋಗುವವರೆಲ್ಲಾ ರಾಜ್ಯಪಾಲರಿಗೆ ದೂರು ಕೊಟ್ಟರೆ ಹೇಗೆ? ಎಂದ ಸಚಿವ
ವಿಜಯಪುರ: ತಿರುಪತಿ ಲಡ್ಡು ವಿಚಾರ (Tirupati Laddu controversy) ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬು ಬೆರಸುವುದು ಘೋರ ಅಪರಾಧ. ದನದ ಕೊಬ್ಬನ್ನು ಬೆರಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿಂದು (Vijayapura) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಮಿಶ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಇದು ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬನ್ನು ಬೆರೆಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಭಕ್ತರ ಭಾವನೆಗಳ ಜೊತೆ ಆಟ ಆವಡುವುದು ಸರಿಯಲ್ಲ. ಅದರಲ್ಲಿ ಪಾವಿತ್ರ‍್ಯತೆ ಇದೆ, ದನದ ಕೊಬ್ಬು ಬೆರೆಸುವುದು ಘೋರ ಅಪರಾಧ. ಆಗಾಗ ಪ್ರಸಾದದ ತಪಾಸಣೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಶಾಸಕ ಮುನರತ್ನ (Munirathna) ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ವಾಭಾವಿಕವಾಗಿ ಯಾರೂ ಊಹಿಸದ ಆಪಾದನೆಗಳು ಅವರ ಮೇಲೆ ಬರುತ್ತಿವೆ. ಎಲ್ಲದರ ಕುರಿತು ತನಿಖೆ ಆಗಲಿ. ನಿಜವಾಗಿ ಆ ರೀತಿ ಘೋರವಾದಂತಹ ಕೃತ್ಯ ಮಾಡಿದ್ದರೇ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ. ಫಸ್ಟ್ ಟೈಮ್ ಊಹಿಸದಂತಹ ಆಪಾದನೆ ಕೇಳಿ ನಾನು ಗಾಬರಿಯಾದೆ. ಹನಿಟ್ರ‍್ಯಾಪ್, ಸಿಡಿ ಮಾಡೋದು, ಹೆಣ್ಣುಮಕ್ಕಳ ಬಳಕೆ ಇವೆಲ್ಲ ಹೇಯ ಕೃತ್ಯಗಳು ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ
ರಾಜ್ಯಪಾಲರಿಗೆ ದೂರು ಕೊಡೊದೇ ಹೊಸ ದಂಧೆ ಆಗುತ್ತೆ:
ರಾಜ್ಯಪಾಲರ ಹಸ್ತಕ್ಷೇಪ ವಿಚಾರ ಕುರಿತು ಮಾತನಾಡಿದ ಸಚಿವರು, ಇದು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮದ್ಯೆದ ಸಂಘರ್ಷವಲ್ಲ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೆಪ ಮಾಡಬಾರದು. ಎಲ್ಲರೂ ಹೋಗಿ ರಾಜ್ಯಪಾಲರಿಗೆ ದೂರು ಕೊಡುವುದು, ಅವರು ಅದನ್ನು ಪರಿಗಣಿಸುವುದು ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಅಶ್ವಿನ್ ಆಲ್‌ರೌಂಡ್ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ
ಪೊಲೀಸ್ ಸ್ಟೇಷನ್ ಬದಲು ರಾಜ್ಯಪಾಲಿಗೆ ದೂರು ಕೊಟ್ಟಂತೆ ಆಗುತ್ತದೆ. ರಾಜ್ಯಪಾಲರಿಗೆ ದೂರು ಕೊಡೊದೇ ಒಂದು ಹೊಸ ದಂಧೆ ಶುರು ಆಗುತ್ತದೆ. ಅದಾಗ್ಯೂ ರಾಜ್ಯಪಾಲರ ಹಸ್ತಕ್ಷೇಪದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾದಿಯಲ್ಲಿ ಹೋಗುವವರು ಬಂದು ಸಿಕ್ಕ ಸಿಕ್ಕವರ ಮೇಲೆ ಮೇಲೆ ಅರ್ಜಿ ಹಾಕಿದರೆ ಹೇಗೆ? ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್ ಕೊಡಲು ಸರ್ಕಾರ ಪ್ಲ್ಯಾನ್!