ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರ ಕ್ಷೇತ್ರಗಳಲ್ಲಿ ಭರದಿಂದ ಸಾಗುತ್ತಿದ್ದು, ಈಗ ಸಚಿವರೊಬ್ಬರು ಕ್ಯಾಂಪೇನ್ ಮಾಡುವ ವೇಳೆ ನಾಗಿಣ್ ಡ್ಯಾನ್ಸ್ ಮಾಡಿದ್ದಾರೆ. ಇದೀಗ ಆ ವಿಡಿಯೋ ವೈರಲ್ ಆಗುತ್ತಿದೆ.
ಲೋಕ ಕ್ಯಾಂಪೇನ್ ವೇಳೆ ವಸತಿ ಸಚಿವ ಎಂಟಿಬಿ ನಾಗರಾಜ್ ನಾಗಿಣ್ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ಮಾಡುತ್ತಿದ್ದರು. ಆಗ ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ಎಂಟಿಬಿ ನಾಗರಾಜ್ ಗ್ರಾಮಸ್ಥರ ಜೊತೆ ಸೇರಿ ನಾಗಿಣ್ ಡ್ಯಾನ್ಸ್ ಮಾಡಿದ್ದಾರೆ.
Advertisement
ಸಚಿವರ ಡ್ಯಾನ್ಸ್ ನೋಡಿ ಸುತ್ತ ನೆರೆದಿದ್ದ ಜನರು ಕೂಡ ಸೇರಿಕೊಂಡು ಹೆಜ್ಜೆ ಹಾಕಿದ್ದಾರೆ. ಕೆಲ ಹುಡುಗರು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಕ್ಯಾಂಪೇನ್ ವೇಳೆ ಎಂಟಿಬಿ ನಾಗರಾಜ್ ಅವರ ನಾಗ ನೃತ್ಯ ಎಲ್ಲರ ಗಮನ ಸೆಳೆದಿದೆ.