ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವ ಅರ್ಹತೆ ಇದೆ ಎಂದು ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಚಿವರು ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಎಂಬಿಟಿ ನಾಗರಾಜ್ ಪ್ರತಿಕ್ರಿಯಿಸಿ, ಖರ್ಗೆ ಸಿಎಂ ಆಗಬೇಕಿತ್ತು ಎಂದು ಮಾತನಾಡುವ ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನ ಬಿಟ್ಟು ಕೊಡ್ತಾರಾ? ಅಷ್ಟು ಕಾಳಜಿ ಇದ್ದರೆ ಖರ್ಗೆಗೆ ಸಿಎಂ ಸ್ಥಾನ ಬಿಟ್ಟುಕೊಡಲಿ ಎಂದು ಸವಾಲ್ ಎಸೆದರು. ಅಷ್ಟೇ ಅಲ್ಲದೇ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಹಿಂದೆ ಯಾರೋ ಇದ್ದಾರೆ ಎಂದು ಆರೋಪಿಸಿದರು.
Advertisement
Advertisement
ಇದೇ ವೇಳೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಎಂಬ ಹೇಳಿಕೆಯನ್ನ ಸಮರ್ಥಸಿಕೊಂಡ ಅವರು, ನಮ್ಮ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬುವುದಕ್ಕೂ ಸಿಎಂ ಕುಮಾರಸ್ವಾಮಿ ಅವರಿಗೂ ಏನು ಸಂಬಂಧ? ನಾವು ಶಾಸಕರೆಲ್ಲ ಸೇರಿ ತೀರ್ಮಾನಿಸಿದರೆ ಯಾರು ಬೇಕಾದ್ರು ಸಿಎಂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಸಿದ್ದರಾಮಯ್ಯ ಸಿಎಂ ಆಗ್ಬೇಕು ಎಂದು ಕೈ ಶಾಸಕರು ತೀರ್ಮಾನಿಸಿದರೆ ಅದನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ. ಕುಮಾರಸ್ವಾಮಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಅವರಿಗೇನು ಸಂಬಂಧ ಎಂದು ಪ್ರಶ್ನಿಸಿ ನೇರವಾಗಿ ವಾಗ್ದಾಳಿ ನಡೆಸಿದರು.
Advertisement
Advertisement
ಇತ್ತ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಎಚ್‍ಡಿಕೆ ಅವರು ಹೇಳಿದ್ದು ಸರಿ ಇದೆ. ಖಗೆ ಅವರಿಗೆ ಅದಕ್ಕಿಂತಲೂ ಉನ್ನತ ಸ್ಥಾನದ ಆರ್ಹತೆ ಇದೆ. ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಅರ್ಹತೆ ಬಹಳ ನಾಯಕರಿಗೆ ಇದೆ. ಅವರಲ್ಲಿ ಎಚ್‍ಡಿ ರೇವಣ್ಣ ಕೂಡಾ ಇಬ್ಬರು.