ರಾಮನಗರ: ಈ ಬಾರಿಯ ಬಜೆಟ್‍ನಲ್ಲಿ ವಸತಿ ಇಲಾಖೆಗೆ ಅನುದಾನ ಕಡಿಮೆ ಮಾಡಿದ್ದಾರೆ. ಆದರೆ ಏಕೆ ಕಡಿಮೆ ಮಾಡಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಸಿಎಂ ಕುಮಾರಸ್ವಾಮಿ ಎದುರಲ್ಲೇ ವಸತಿ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗವಹಿಸಿದ್ದರು. ಈ ವೇಳೆ ಮಾತನಾಡಿ, ಬಜೆಟ್‍ನಲ್ಲಿ ಸಿಕ್ಕಿರುವ ಅನುದಾನ ಕಡಿಮೆಯಾಗಿದೆ. ವಸತಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಸಿಎಂಗೆ ನಿರಂತರವಾಗಿ ಬಡವರ ಆರ್ಶೀವಾದ ಮನೆ ನಿರ್ಮಿಸಿ ಕೊಟ್ಟರೆ ಸಿಗುತ್ತೆ ಎಂದರು.
Advertisement
Advertisement
ಬಳಿಕ ಮಾತನಾಡಿದ ಸಿಎಂ ಎಚ್‍ಡಿಕೆ, ಕ್ಯಾಬಿನೆಟ್‍ನಲ್ಲಿ ಚರ್ಚೆ ಮಾಡುವುದನ್ನು ಬಿಟ್ಟು ಇಲ್ಲೇ ಪ್ರಸ್ತಾಪ ಮಾಡಿಬಿಟ್ಟರು. ನನ್ನ ಕಷ್ಟ ಅವರಿಗೇನೂ ಗೊತ್ತಿದೆ. ಸಚಿವ ಡಿಕೆ ಶಿವಕುಮಾರ್ ಅವರಿಗೆ ಈ ಬಗ್ಗೆ ಎಲ್ಲ ಗೊತ್ತಿದೆ. ನಾಗರಾಜ್ ಅವರು ಹೊಸದಾಗಿ ಮಂತ್ರಿಗಳಾಗಿದ್ದಾರೆ. ಆದ್ದರಿಂದ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲ. ಹಿಂದಿನ ಸರ್ಕಾರದಲ್ಲಿ ನಿಗದಿಯಾಗಿದ್ದ ಮನೆಗಳ ಪೂರ್ಣಗೊಳಿಸಲು ಕೂಡ ಹಣ ಬಿಡುಗಡೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅನುದಾನವನ್ನು ಹೆಚ್ಚಿಸಲಾಗುವುದು ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv