ಬೆಂಗಳೂರು: ಸರ್ಕಾರದ ವಿರುದ್ಧ ಶೇ.40 ಭ್ರಷ್ಟಾಚಾರ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತು 18 ಮಂದಿ (Kempanna and Contractors Association) ವಿರುದ್ಧ ಕ್ರಿಮಿನಲ್ ಮಾನಷ್ಟ ಕೇಸ್(Criminal Defamation Case) ಹೂಡಿದ್ದೇನೆ. ಸೆ.21ಕ್ಕೆ ಕೋರ್ಟ್‌ನಲ್ಲಿ ನನ್ನ ಹೇಳಿಕೆ ದಾಖಲಾಗುತ್ತದೆ. ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗುತ್ತದೆ ಎಂದು ತೋಟಗಾರಿಕಾ ಸಚಿವ ಮುನಿರತ್ನ(Munirathna ) ಹೇಳಿದ್ದಾರೆ.
ನನ್ನ ವಿರುದ್ಧ ಮಾಡಿದ ಆರೋಪವು ಸೇರಿದಂತೆ 40% ಕಮೀಷನ್(40 Percent Commission) ಆರೋಪಕ್ಕೆ ದಾಖಲೆ ಕೊಡಿ ಎಂದು ದಾವೆ ಹೂಡಿದ್ದೇನೆ. 50 ಕೋಟಿ ಮಾನನಷ್ಟ ಪ್ರಕರಣವನ್ನು 4 ತಿಂಗಳ ಒಳಗಡೆ ಇತ್ಯರ್ಥ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.
Advertisement
Advertisement
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕೆಂಪಣ್ಣ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಆಧಾರ ರಹಿತ ಆರೋಪ ಮಾಡಿದ್ದಕ್ಕೆ ನಾನು 7 ದಿನಗಳ ಒಳಗಡೆ ಕ್ಷಮೆ ಕೇಳುವಂತೆ ಸೂಚಿಸಿದ್ದೆ. ಆದರೆ ಅವರು ಕ್ಷಮೆ ಕೇಳದ ಹಿನ್ನೆಲೆಯಲ್ಲಿ ಮಾನನಷ್ಟ ಕೇಸ್ ಹೂಡಿದ್ದೇನೆ. ಚುನಾವಣೆ ನಡೆಯುವ ಮುನ್ನ ಇತ್ಯರ್ಥ ಆಗಬೇಕಾಗಿರುವುದರಿಂದ 4 ತಿಂಗಳ ಒಳಗಡೆ ಪ್ರಕರಣವನ್ನು ಮುಗಿಸುವಂತೆ ಸೆಕ್ಷನ್ 227 ಅನ್ವಯ ರಿಟ್ ಅರ್ಜಿ ಹಾಕುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸುಮಲತಾ ಹೇಳಿದ ದಿನ ಆಣೆ ಮಾಡಲು ರೆಡಿ- ಮೇಲುಕೋಟೆ ಸನ್ನಿಧಿಯಲ್ಲಿ ಪುಟ್ಟರಾಜು ಸವಾಲು ಸ್ವೀಕಾರ
Advertisement
ಪ್ರಕರಣದ ಆರೋಪಿಗಳು ಯಾವುದೇ ಆಸ್ತಿ ಪರಭಾರೆ ಮಾಡುವಂತಿಲ್ಲ. ಯಾವುದೇ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಿದ್ದರೆ ಅದರ ಬಿಲ್ ಬಿಡುಗಡೆ ಆಗಬಾರದು. ಅವರ ಕುಟುಂಬದಲ್ಲಿ ಯಾವುದೇ ವಿಲ್ ಮಾಡುವಂತಿಲ್ಲ. ಎಲ್ಲದಕ್ಕೂ ಇನ್‌ಜಂಕ್ಷನ್ ಆರ್ಡರ್ ತರಲಾಗಿದ್ದು ಎಲ್ಲಾ 18 ಮಂದಿಗೂ ಇದು ಅನ್ವಯವಾಗಲಿದೆ ಎಂದರು.
Advertisement
ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ದಾಖಲೆ ಇಟ್ಟು ಮಾತನಾಡಿದರೆ ಅವರ ಘನೆ ಹೆಚ್ಚಾಗಲಿದೆ. ಈ ಪ್ರಕರಣದಲ್ಲಿ ಈಗ ಎರಡೇ ಉಳಿದಿದೆ. ದಾಖಲೆ ನೀಡಿ ನನಗೆ ಶಿಕ್ಷೆ ಕೊಡಿಸಿ, ದಾಖಲೆ ಇಲ್ಲದಿದ್ದರೆ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.
ಈಗಾಗಲೇ ಕಾಂಗ್ರೆಸ್ ನಾಯಕರನ್ನು ಜನ ತಿರಸ್ಕಾರ ಮಾಡಿದ್ದು, ಇವರು ಯಾಕೆ ಇಷ್ಟೊಂದು ಆಸೆ ಪಡ್ತಿದ್ದಾರೆ ಅಂತ ಗೊತ್ತಿಲ್ಲ. ಇವರು ಅಧಿಕಾರಕ್ಕಂತೂ ಬರುವುದಿಲ್ಲ. 2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. 2023ರ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಲ್ಲಿ ಹುಡುಕಬೇಕು ಎಂದು ವ್ಯಂಗ್ಯವಾಡಿದರು.