ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ (Badami) ಪಂಚತಾರಾ ಹೋಟೆಲ್ (Hotel Panchatara) ಸ್ಥಾಪಿಸುವಂತೆ ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ (Murugesh Nirani) ಸಲಹೆ ನೀಡಿದರು.
ಜಾಗತಿಕ ಹೂಡಿಕೆದಾರ (Industry Conference) ಸಮಾವೇಶದ ರೋಡ್‌ಶೋ ಭಾಗವಾಗಿ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ, ಐಟಿಸಿಯ (ITC) ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ
Advertisement
Advertisement
ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾಗಿದ್ದು, ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಆದರೆ ಹೋಟೆಲ್ (Hotel) ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ
Advertisement
Advertisement
ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕವಾಗಿ ಆಹ್ವಾನಿಸಿದರು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ (Industry) ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್‌ಕೆಸಿಸಿ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.