ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಬಿ. ನಾಗೇಂದ್ರ(Nagendra) ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ (Delhi) ತಲುಪಿದ್ದಾರೆ. ಸದ್ಯ ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಇಂದು ಕಾಂಗ್ರೆಸ್ ಹೈಕಮಾಂಡ್‌ನ(Congress High Command) ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ.
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸರಣಿ ಬೆಳವಣಿಗೆಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಭಾರಿ ಬದಲಾವಣೆ ಆಗುತ್ತಾ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಮೇಲಿನ ಆರೋಪಗಳು ಮತ್ತು ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಪಕ್ಷದ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಿ, ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ
ರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಪಟ್ಟುಹಿಡಿದು ಪಾದಯಾತ್ರೆ ಹೋರಾಟಕ್ಕೆ ಸಜ್ಜಾಗುತ್ತಿರುವ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ. ಸಚಿವ ಸ್ಥಾನದ ಭವಿಷ್ಯ ಹಾಗೂ ಸರ್ಕಾರದ ಮುಂದಿನ ನಡೆಯ ಕುರಿತು ಈ ಸಭೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.
