ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) 94 ಕೋಟಿ ರೂ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ (Nagendra) ರಾಜೀನಾಮೆ (Resignation) ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಮಹದೇವಪ್ಪ (Mahadevappa) ಹೇಳುವ ಮೂಲಕ ನಾಗೇಂದ್ರ ಬೆನ್ನಿಗೆ ನಿಂತಿದ್ದಾರೆ.
ಚಂದ್ರಶೇಖರನ್ ಒಬ್ಬ ಒಳ್ಳೆಯ ಅಧಿಕಾರಿ. ಅವರ ಆತ್ಮಹತ್ಯೆಯಿಂದ ತುಂಬ ದು:ಖವಾಗಿದೆ. ಡೆತ್‌ನೋಟ್‌ನಲ್ಲಿ ಕೆಲ ಆರೋಪಗಳನ್ನು ಮಾಡಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತು ತನಿಖೆ ಶುರು ಮಾಡಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ತನಿಖೆಯ ಬಳಿಕ ಸತ್ಯಾಸತ್ಯ ಹೊರಗಡೆ ಬರಲಿದೆ ಎಂದರು. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಜೂನ್ 9 ರಂದು ಮೋದಿ ಪ್ರಮಾಣ ವಚನ!
ಇಲ್ಲಿ ದಲಿತರು, ದಲಿತೇತರ ಹಣ ಅಂತಲ್ಲ.ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ರಾಜಕೀಯಕರಣಗೊಳಿಸಿದ ತಕ್ಷಣ ಮಾತಾಡಲು ಆಗುವುದಿಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ. ವಿರೋಧ ಪಕ್ಷ ಆಗಿರುವರಿಂದ ರಾಜೀನಾಮೆ ಕೇಳುತ್ತಾರೆ. ಸತ್ಯಾಸತತೆ ಹೊರಗಡೆ ಬಾರದೇ ಯಾವ ತೀರ್ಮಾನ ಮಾಡಲು ಆಗುವುದಿಲ್ಲ ಎಂದು ಸಚಿವ ನಾಗೇಂದ್ರ ಬೆನ್ನಿಗೆ ಸಚಿವ ಮಹಾದೇವಪ್ಪ ನಿಂತರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್ – ಯೂನಿಯನ್ ಬ್ಯಾಂಕ್‌ನಿಂದಲೇ ವಂಚನೆ, ಕೇಸ್ ದಾಖಲು
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಹಂಚಿದ್ದ ಹಣ ವಾಲ್ಮೀಕಿ ನಿಗಮದ್ದು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ವಿರೋಧ ಪಕ್ಷ ಏನು ಬೇಕಾದರೂ ಹೇಳಬಹುದು. ಪ್ರಕರಣ ಬೆಳಕಿಗೆ ಬಂದ ಕೂಡಲೇ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈಗಾಗಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.