ಮಡಿಕೇರಿ: ಹಿಂದಿನ ಅಧಿಕಾರಗಳ ಯಡವಟ್ಟಿನಿಂದ ಕೆಲವೆಡೆ ದಾಖಲಾತಿಗಳಲ್ಲಿ ವಕ್ಫ್ ಆಸ್ತಿ (Waqf Property) ಎಂದು ನಮೂದಾಗಿದೆ. ಅದೆಲ್ಲವನ್ನು ಸರಿಪಡಿಸಲು ಈಗಾಗಲೇ ಸಿಎಂ ಆದೇಶ ನೀಡಿದ್ದಾರೆ. ಆದ್ರೆ ಬಿಜೆಪಿಯವರು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಬೋಸರಾಜು (NS Boseraju) ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Advertisement
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅವರು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿವಿಧ ಜಿಲ್ಲೆಯ ಹಲವು ರೈತರಿಗೆ (Farmers) ಸಂಬಂಧಿಸಿದ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಇದು ಹಿಂದಿನ ಅಧಿಕಾರಿಗಳಿಂದ ಆಗಿರುವ ಯಡವಟ್ಟು. ಅದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ಕ್ಯಾಬಿನೆಟ್‌ನಲ್ಲಿಯೂ ಈ ವಿಚಾರ ಪ್ರಸ್ತಾಪ ಮಾಡಿ ತಕ್ಷಣವೇ ಸರಿಪಡಿಸುವಂತೆ ಆದೇಶ ನೀಡಿದ್ದಾರೆ. ಆದ್ರೆ ರಾಜ್ಯದಲ್ಲಿ ಉಪಚುನಾವಣೆ ಇರುವುದರಿಂದ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ದೀಪಾವಳಿ ಪಟಾಕಿ ಹೊಡೆಯುತ್ತಿದ್ದಾಗ ದುಷ್ಕರ್ಮಿಗಳಿಂದ ಗುಂಡಿನ ದಾಳಿ – ಇಬ್ಬರು ಸಾವು
Advertisement
Advertisement
5 ವರ್ಷವೂ ಗ್ಯಾರಂಟಿಗಳು ಇರುತ್ತವೆ:
ಇದೇ ವೇಳೆ ಶಕ್ತಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳಿಗೆ ಬಜೆಟ್‌ನಲ್ಲಿ 52,000 ಕೋಟಿ ರೂ. ಮೀಸಲಿಟ್ಟಿದ್ದೇವೆ. ಎಲ್ಲ ಯೋಜನೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಅನುದಾನ ಬಿಡುಗಡೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ಐದು ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಭರವಸೆ ನೀಡಿದ್ದಾರೆ.
Advertisement
ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಗ್ಯಾರಂಟಿ ಪರಿಷ್ಕರಣೆ ವಿಚಾರಕ್ಕೆ ಆಕ್ಷೇಪ ಮಾಡಿದ್ದಾರೆ ಅನ್ನೋ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಖರ್ಗೆ ಅವರು ಮಾಧ್ಯಮಗಳಲ್ಲಿ ಈ ವಿಚಾರಗಳು ಯಾಕೆ ಬಂದಿದೆ ಎಂದು ಕೇಳಿದ್ದಾರೆ. ಗೊಂದಲ ಏಕೆ ಸೃಷ್ಟಿ ಮಾಡುತ್ತಿರಿ ಅಂತ ಹೇಳಿದ್ದಾರೆ ಅಷ್ಟೆ. ಇದರಿಂದ ಯಾವುದೇ ಗೊಂದಲ ಆಗಿಲ್ಲ. ಯೋಜನೆ ಪರಿಷ್ಕರಣೆಯ ಪ್ರಸ್ತಾಪವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ʻಚೆನಾಬ್ʼ ಬಗ್ಗೆ ಪಾಕ್-ಚೀನಾದಿಂದ ಮಾಹಿತಿ ಸಂಗ್ರಹ
ಮೂರು ಕ್ಷೇತ್ರಗಳಲ್ಲಿ ಗೆಲುವು ಖಚಿತ:
ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ನಮ್ಮ ಆಂತರಿಕ ಸಮೀಕ್ಷೆಯ ಪ್ರಕಾರ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ನುಡಿದಿದ್ದಾರೆ.