ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಗುರುವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇನೆ ಎಂದು ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಭ್ಯ
Have tested Covid positive.
Urge all those who have come in recent contact to take suitable precautions.
— Dr. S. Jaishankar (@DrSJaishankar) January 27, 2022
ಇತ್ತೀಚೆಗೆ ಜೈಶಂಕರ್ ಅವರು ಫ್ರಾನ್ಸ್‍ನಲ್ಲಿ ಭಾರತಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲು ಫ್ರೆಂಚ್ ಕೌಂಟರ್‍ಪಾರ್ಟ್ ಜೀನ್-ಯ್ವೆಸ್ ಲೆ ಡ್ರಿಯನ್ ಅವರನ್ನು ಭೇಟಿ ಮಾಡಿದ್ದರು. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡುತ್ತಿದೆ: ಅನ್ಸಾರಿ
ಸದ್ಯ ದೇಶಾದ್ಯಂತ ಅತೀ ಹೆಚ್ಚು ಕೋವಿಡ್ ಕೇಸ್‍ಗಳು ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕಂಡುಬರುತ್ತಿದೆ. ಗುರುವಾರದ ವರದಿಯ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಪ್ರಕರಣಗಳು ದಾಖಲಾಗಿದೆ.