ಮೈಸೂರು: ಸರಿಯಾಗಿ ಕೆಲಸ ಮಾಡದೆ ಇದ್ದರೆ ಎಲ್ಲರನ್ನೂ ಒಟ್ಟಾಗಿ ಬಳ್ಳಾರಿಗೆ ವರ್ಗಾಯಿಸಿ ಬಿಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿದ್ದ ಸಚಿವರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿಲ್ಲ. ಇದೇ ವೇಳೆ ಕಾಲೇಜನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಗರಂ ಆದ್ರು. ಮಹಾರಾಣಿ ಕಾಲೇಜು ಪ್ರತಿಷ್ಠಿತ ಕಾಲೇಜಾಗಿದೆ. ನೀವು ಜವಾಬ್ದಾರಿಯುತ ಅಧಿಕಾರಿಗಳಾಗಿದ್ದೀರಿ ಎಂದು ತರಾಟೆಗೆ ತೆಗೆದು ಕೊಂಡರು.
ಇದೇ ವೇಳೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿ, ನೀವು ಹೀಗೆ ಇದ್ದರೆ ಒಬ್ಬರನ್ನು ಬಿಡದಂತೆ ಎಲ್ಲರನ್ನು ಬಳ್ಳಾರಿಗೆ ಕಳುಹಿಸಿ ಬಿಡುತ್ತೇನೆ ಎಂದರು. ಸಚಿವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ರವಾನಿಸುತ್ತಿದ್ದಂತೆ ಕಾಲೇಜಿನಲ್ಲಿದ್ದ ವಿದ್ಯಾರ್ಥಿನಿಯರು ಚಪ್ಪಾಳೆ ತಟ್ಟಿದರು.
ಕಾಲೇಜು ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಸ್ವತಃ ಆಲಿಸಿದ ಸಚಿವರು, ಸ್ಥಳದಲ್ಲೇ ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಅಲ್ಲದೇ ಸರ್ಕಾರ ಕಲ್ಪಿಸಿರುವ ಸೌಲಭ್ಯಗಳನ್ನೇ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.