ಬೆಂಗಳೂರು: ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿಗೆ ಪ್ರಮಾಣ ವಚನ ಸ್ವೀಕಾರ ಮಾಡಿಯೇ ಮಾಡುತ್ತಾರೆ ಎಂದು ಅರಭಾವಿ ಕ್ಷೇತ್ರದಿಂದ ಜನರು ಬೆಂಗಳೂರಿಗೆ ಬಂದಿದ್ದರು. ಈಗ ಪಟ್ಟಿಯಲ್ಲಿ ಜಾರಕಿಹೊಳಿ ಹೆಸರು ಕೈ ಬಿಟ್ಟಿರುವುದಕ್ಕೆ ಬೆಂಗಲಿಗರು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
Advertisement
ಬಾಲಚಂದ್ರ ಜಾರಕಿಹೊಳಿ ಸಂಪುಟಕ್ಕೆ ಸೇರುವುದು ಖಚಿತವಾಗಿತ್ತು. ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೂಡ ಇತ್ತು. ಆದರೆ ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ. ನಮಗೆ ಶಾಕ್ ಆಗಿದೆ. ಬಾಲಚಂದ್ರ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕ್ಷೇತ್ರದ ತುಂಬಾ ಓಡಾಡಿಕೊಂಡಿದ್ದರು. ಬಹುಶಃ ಇದೆಲ್ಲ ಹೈಕಮಾಂಡ್ ನಿರ್ಧಾರವಾಗಿದೆ. ಮೊದಲ ಲಿಸ್ಟ್ ಗೆ ಅವರನ್ನು ಪರಿಗಣಿಸಬೇಕಾಗಿತ್ತು. ಇದರಿಂದ ನಮಗೆಲ್ಲಾ ಬೇಸರ ತಂದಿದೆ ಎಂದು ಬೆಂಬಲಿಗರು ಹೇಳಿದ್ದಾರೆ.
Advertisement
ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಅವರು ಒಂದಲ್ಲ ಒಂದು ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಇದೇ ಮೊದಲ ಬಾರಿಗೆ 15 ವರ್ಷಗಳ ಬಳಿಕ ಜಾರಕಿಹೊಳಿ ಕುಟುಂಬಕ್ಕೆ ಮಂತ್ರಿಗಿರಿ ಕೈ ತಪ್ಪಿದೆ. ಬಾಲಚಂದ್ರ ಜಾರಕಿಹೊಳಿ ಜೊತೆಗೆ ಉಮೇಶ್ ಕತ್ತಿ ಅವರಿಗೂ ಮಂತ್ರಿಸ್ಥಾನ ತಪ್ಪಿದೆ.