ಬೆಂಗಳೂರು: ಸರಳ-ಸಜ್ಜನ, ಸ್ನೇಹಮಯಿ ಆಗಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ (BC Nagesh) ಅವರ ನಿಧನಕ್ಕೆ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಂಬನಿ ಮಿಡಿದಿದ್ದಾರೆ.
ಸರಳ-ಸಜ್ಜನಿಕೆ ವ್ಯಕ್ತಿತ್ವದವರಾಗಿದ್ದ ನಾಗೇಶ್ ಅವರು ವೈಚಾರಿಕ ಬದ್ಧತೆ ಹಾಗೂ ಜನಪರ ಕಾಳಜಿಗೆ ಹೆಸರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅವರು ತಂದ ಹಲವು ಸುಧಾರಣೆಗಳು ಮತ್ತು ಸಂಘಟನಾ ಕೌಶಲ್ಯ ಸದಾ ಸ್ಮರಣೀಯ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಆರಂಭಿಸಿ, ಶಾಸಕರಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದರೆಂದು ಜೋಶಿ ಸ್ಮರಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಬೈಕ್‌ಗಳು ಮುಖಾಮುಖಿ ಡಿಕ್ಕಿ; ಮಗುವಿಗೆ ಔಷಧಿ ತರುತ್ತಿದ್ದ ವ್ಯಕ್ತಿ ಸೇರಿ ಇಬ್ಬರು ಸಾವು
ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ತಿಪಟೂರು-ತುಮಕೂರು ಭಾಗದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯ. ಬಿಜೆಪಿ ಪಕ್ಷ ಸಂಘಟನೆಯಲ್ಲೂ ಮಹತ್ವದ ಪಾತ್ರ ವಹಿಸಿದ್ದರು. ಬಿ.ಸಿ.ನಾಗೇಶ್ ಅವರ ಅಗಲಿಕೆಯಿಂದ ಶಿಕ್ಷಣ ಕ್ಷೇತ್ರಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಮೃತದೇಹ ತುಂಗಭದ್ರಾ ನದಿಗೆ ಬಿಸಾಕಿದ ಪತ್ನಿ
ಸರಳತೆ, ಸೌಜನ್ಯಕ್ಕೆ ಹೆಸರಾಗಿದ್ದ ನಾಗೇಶ್ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಸಚಿವ ಜೋಶಿ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ; ಸಿಎಂ ಸೇರಿ ಗಣ್ಯರಿಂದ ಸಂತಾಪ

