Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ – ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ – ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ

Latest

ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ – ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ

Public TV
Last updated: December 11, 2025 6:30 pm
Public TV
Share
3 Min Read
Pralhad Joshi Hydrogen Car 1
SHARE

ನವದೆಹಲಿ: ಆತ್ಮನಿರ್ಭರ ಭಾರತ ಇನ್ನು ಹೈಡ್ರೋಜನ್ ಚಾಲಿತ ವಾಹನಗಳ ರಾಷ್ಟ್ರವಾಗಿ ಕಂಗೊಳಿಸಲಿದ್ದು, ಈ ನಿಟ್ಟಿನಲ್ಲಿ ಇದೀಗ ಮಹತ್ವದ ಹೆಜ್ಜೆಯಿರಿಸಿದೆ. ಇದಕ್ಕೆ ನಿದರ್ಶನವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಗುರುವಾರ ದೆಹಲಿಯಲ್ಲಿ ಹೈಡ್ರೋಜನ್ ಕಾರನ್ನೇ (Hydrogen Car) ಚಲಾಯಿಸಿಕೊಂಡು ಅಧಿವೇಶನಕ್ಕೆ ಬಂದಿದ್ದು, ದೇಶದ ಗಮನ ಸೆಳೆದಿದೆ.

ಗುರುವಾರ ಬೆಳಗ್ಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಚಳಿಗಾಲದ ಅಧಿವೇಶನಕ್ಕೆ ಹೈಡ್ರೋಜನ್ ಕಾರಿನಲ್ಲೇ ಆಗಮಿಸಿ ಎಲ್ಲರ ಹುಬ್ಬೇರಿಸಿದ ಪ್ರಸಂಗಕ್ಕೆ ಸಾಕ್ಷಿಯಾದರು. ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರ್ ಚಾಲಾಯಿಸಿಕೊಂಡು ಬಂದು ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.

ದೆಹಲಿಯ ಅಟಲ್ ಅಕ್ಷಯ ಉರ್ಜ ಭವನದಿಂದ ಸಂಸತ್ ಭವನಕ್ಕೆ ಹಸಿರು ಬಣ್ಣದ ಹೈಡ್ರೋಜನ್ ಕಾರಿನಲ್ಲೇ ಧಾವಿಸಿದ ಜೋಶಿ, ದೇಶದಲ್ಲಿ ಹೈಡ್ರೋಜನ್, ಹಸಿರು ಶಕ್ತಿ ಮತ್ತು ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಿದರು.

ನವೀಕರಿಸಬಹುದಾದ ಇಂಧನ ಇಲಾಖೆ, ಟೊಯೋಟಾ ಕಿರ್ಲೋಸ್ಕರ್ ಕಂಪನಿ ಮತ್ತು ರಾಷ್ಟ್ರೀಯ ಸೌರಶಕ್ತಿ ಸಂಸ್ಥೆ (NISE) ಅಡಿಯಲ್ಲಿ ತಯಾರಿಸಿದ ಈ ಕಾರು ಸಂಚಾರಕ್ಕೆ ಪೆಟ್ರೋಲ್, ಡಿಸೇಲ್ ಅಲ್ಲ, ಕೇವಲ ಹೈಡ್ರೋಜನ್ನೇ ಸಾಕು. ಪರಿಸರ ಹಿತಕರವಾಗಿರುವ ಇದು ನಿಶ್ಯಬ್ದವಾಗಿ ಓಡುವ ಕಾರು ಆಗಿದೆ.

ಟೊಯೋಟಾ ಮಿರೈ ಮಾಹಿತಿ:
ಎರಡನೇ ತಲೆಮಾರಿನ ಹೈಡ್ರೋಜನ್ ಪೂರಿತ ಈ ವಿದ್ಯುತ್ ವಾಹನ 9ಎಫ್‌ಸಿಇವಿ ಆಗಿರುವ ಟೊಯೋಟಾ ‘ಮಿರೈ’ ಹೈಡ್ರೋಜನ್ ಮತ್ತು ಆಮ್ಲಜನಕದ ನಡುವಿನ ರಾಸಾಯನಿಕ ಕ್ರಿಯೆಯ ಮೂಲಕ ವಿದ್ಯುತ್ ಉತ್ಪಾದಿಸುತ್ತದೆ. ಉಪ-ಉತ್ಪನ್ನವಾಗಿ ನೀರಿನ ಆವಿಯನ್ನು ಮಾತ್ರ ಹೊರಸೂಸುತ್ತದೆ. ಸರಿಸುಮಾರು 650 ಕಿ.ಮೀ. ಚಾಲನಾ ವ್ಯಾಪ್ತಿ ಮತ್ತು 5 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಇಂಧನ ತುಂಬುವ ಸಮಯದೊಂದಿಗೆ ಇದು ವಿಶ್ವದ ಅತ್ಯಂತ ಮುಂದುವರಿದ ಮತ್ತು ಪರಿಣಾಮಕಾರಿ ಶೂನ್ಯ-ಹೊರಸೂಸುವಿಕೆಯ ಅತ್ಯದ್ಭುತ ವಾಹನವಾಗಿದೆ.

Pralhad Joshi Hydrogen Car

ಹಸಿರು ಹೈಡ್ರೋಜನ್ ಚಲನಶೀಲತೆ:
ಭಾರತ ಎನ್‌ಐಎಸ್‌ಇ-ಟೊಯೋಟಾ ಸಹಯೋಗದಲ್ಲಿ ಹಸಿರು ಹೈಡ್ರೋಜನ್ ಚಲನಶೀಲತೆಯನ್ನು ಮುನ್ನಡೆಸುವ ಸಂಕೇತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಸಾರಿಗೆ ದೃಷ್ಟಿಕೋನದ ಪ್ರೇರಣೆಯಾಗಿದೆ ಮತ್ತು ಭಾರತದ ಶುದ್ಧ ಇಂಧನ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲು ಎಂದು ಸಚಿವ ಪ್ರಹ್ಲಾದ್ ಜೋಶಿ ಇದೇ ವೇಳೆ ಸಂತಸ ಹಂಚಿಕೊಂಡರು.

ಭಾರತದಲ್ಲಿ ಹಸಿರು ಹೈಡ್ರೋಜನ್ ಭವಿಷ್ಯದ ಇಂಧನವಾಗಿ ಸ್ಥಾನ ಪಡೆದಿದೆ. ಜಾಗತಿಕವಾಗಿಯೇ ಭವಿಷ್ಯದ ಇಂಧನ ವ್ಯವಸ್ಥೆಗಳ ಬೆನ್ನೆಲುಬಾಗಿ ಹಸಿರು ಹೈಡ್ರೋಜನ್ ಹೊರಹೊಮ್ಮುತ್ತಿದೆ. ಭಾರತದ ಶುದ್ಧ ಇಂಧನ ಪರಿವರ್ತನೆ ಹಾಗೂ ‘ಆತ್ಮ ನಿರ್ಭರ’ತೆಯನ್ನು ಇದು ಬಲಪಡಿಸುತ್ತದೆ ಎಂದು ಹೇಳಿದರು.

ಕಡಿಮೆ ಇಂಗಾಲ ಹೊರಸೂಸುವಿಕೆಯ ಈ ಹೈಡ್ರೋಜನ್ ಸಾರಿಗೆ ಭಾರತದ ಪಂಚಾಮೃತ ಹವಾಮಾನ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಮುಂಬರುವ ದಶಕಗಳಲ್ಲಿ ಹಸಿರು ಹೈಡ್ರೋಜನ್ ಭಾರತದ ಇಂಧನ ಆರ್ಥಿಕತೆಯನ್ನು ಮುನ್ನಡೆಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ 2 ವರ್ಷಗಳಲ್ಲಿ ಹೈಡ್ರೋಜನ್ ವಾಹನ ಪ್ರಯೋಗವು ದೇಶಾದ್ಯಂತ ಹೈಡ್ರೋಜನ್ ಚಲನಶೀಲತೆಯನ್ನು ಹೆಚ್ಚಿಸುತ್ತದೆ. ಹೈಡ್ರೋಜನ್ ಇಂಧನ ಕೋಶ ವಾಹನಗಳು ನೀರನ್ನು ಮಾತ್ರ ಹೊರಸೂಸುತ್ತವೆ ಎಂದು ಹೇಳಿದರು.

ಭಾರತದಲ್ಲಿ ಹೈಡ್ರೋಜನ್ ಚಲನಶೀಲತೆ ಸಿದ್ಧ:
ಹೈಡ್ರೋಜನ್ ವಾಹನವನ್ನು ಖುದ್ದು ತಾವೇ ಚಾಲನೆ ಮಾಡಿದ ಸಚಿವರು, ಭಾರತ ಹೈಡ್ರೋಜನ್ ಚಲನಶೀಲತೆಗೆ ಸಿದ್ಧವಾಗಿದೆ ಮತ್ತು ಈ ವಾಹನಗಳು ಭಾರತೀಯ ಪರಿಸ್ಥಿತಿಗಳಿಗೆ ಸೂಕ್ತವಾಗಿದೆ ಎಂಬ ಸ್ಪಷ್ಟ ಸಂದೇಶ ಸಹ ನೀಡಿದರು. ಈ ನಿಟ್ಟಿನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತಾಂತ್ರಿಕತೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ಯೆಸ್ಸೋ ನಾಯಕ್, ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ, ಎಂಎನ್‌ಆರ್‌ಇ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ರಾಷ್ಟ್ರೀಯ ಸೌರಶಕ್ತಿ ಸಂಸ್ಥೆ ಮಹಾನಿರ್ದೇಶಕ ಡಾ.ಮೊಹಮ್ಮದ್ ರಿಹಾನ್ ಮತ್ತು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ನ ಮಿಷನ್ ನಿರ್ದೇಶಕ ಅಭಯ್ ಬಕ್ರೆ ಉಪಸ್ಥಿತರಿದ್ದರು.

TAGGED:Hydrogen CarindiaNew DelhiPralhad Joshiನವದೆಹಲಿಪ್ರಹ್ಲಾದ್ ಜೋಶಿಭಾರತಹೈಡ್ರೋಜನ್ ಕಾರು
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

kea
Bengaluru City

ಯುಜಿ ನೀಟ್ ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ: ಕೆಇಎ

Public TV
By Public TV
9 minutes ago
Pink Metro 2
Bengaluru City

Namma Metro | ಗುಲಾಬಿ ಮಾರ್ಗದ ಮೊದಲ ಚಾಲಕರಹಿತ ರೈಲು ಅನಾವರಣ – ಸಂಚಾರ ಆರಂಭ ಯಾವಾಗ?

Public TV
By Public TV
42 minutes ago
Belagavi Session
Belgaum

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು – ರಾಜ್ಯ ಸರ್ಕಾರ ಮಸೂದೆ ಮಂಡನೆ

Public TV
By Public TV
54 minutes ago
G Paremeshwar
Belgaum

ಡ್ರಗ್‌ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ್

Public TV
By Public TV
1 hour ago
Siddaramaiah 1 1
Belgaum

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿಎಂ ಭರವಸೆ

Public TV
By Public TV
1 hour ago
BY Vijayendra 1
Bengaluru City

ಮುಖ್ಯಮಂತ್ರಿ ಇನ್ನಾದರೂ ದ್ವೇಷದ ರಾಜಕಾರಣ ಬದಿಗಿಡಬೇಕು: ಬಿವೈವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?