ಹುಬ್ಬಳ್ಳಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
Advertisement
ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮ ದಿನಾಚರಣೆ ಹಿನ್ನೆಲೆ ಹಳೇ ಹುಬ್ಬಳ್ಳಿಯ ಹೆಗ್ಗೇರಿಯ ರುದ್ರಭೂಮಿಯಲ್ಲಿ ಪ್ರಹ್ಲಾದ್ ಜೋಶಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಚ್ಛತಾ ಅಭಿಯಾನ ನಡೆಸಿದರು. ಇದನ್ನೂ ಓದಿ: ಯೇಸು ಕ್ರಿಸ್ತರ ಉದಾತ್ತ ಸಂದೇಶಗಳನ್ನು ಸ್ಮರಿಸೋಣ: ಮೋದಿ ಕ್ರಿಸ್‌ಮಸ್ ಶುಭಾಶಯ
Advertisement
Advertisement
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರುದ್ರಭೂಮಿ ಸ್ವಚ್ಚತೆ ಕೈಗೆತ್ತಿಕೊಳ್ಳಲಾಗಿದೆ. ಶಾಶ್ವತವಾಗಿ ಸ್ವಚ್ಚಗೊಳಿಸಿ, ಸುಣ್ಣ-ಬಣ್ಣ ಬಳಿದು ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಪ್ರಧಾನಿಗಳ ಆಶಯ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಸೆಯಂತೆ ಸ್ವಚ್ಛತಾ ಕಾರ್ಯ ನಡೆಯುತ್ತಿದೆ ಎಂದರು.
Advertisement
ಸಂಸತ್ ಸದನದಲ್ಲಿ ಪ್ರತಿಪಕ್ಷಗಳ ವರ್ತನೆಗೆ ವಿಷಾದ ವ್ಯಕ್ತಪಡಿಸಿ ಅಂದರೂ ಕೇಳಲಿಲ್ಲ. ಮೋದಿ ಏನೇ ಮಾಡಿದರೂ ಕಾಂಗ್ರೆಸ್‍ನವರು ವಿರೋಧ ಮಾಡುತ್ತಿದ್ದಾರೆ. ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ. ಅಂಬೇಡ್ಕರ್ ಅವರ ಸಂವಿಧಾನವನ್ನು ಸಹ ಬಹಿಷ್ಕಾರ ಮಾಡಿದರು. ಕಾಂಗ್ರೆಸ್ ಪಕ್ಷ ಬಹಿಷ್ಕಾರ ಮಾಡಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್
ಸಿಎಂ ಬದಲಾವಣೆ ಕುರಿತು ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ಇಲ್ಲ. ಊಹಾಪೋಹಗಳಿಗೆ ಕಿವಿಗೊಡಬಾರದು. ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳನ್ನು ಹರಡುವುದು ತಪ್ಪು. ಅವರು ಅಮೆರಿಕಾಗೆ ಹೋಗುತ್ತಾರೆ, ಅವರನ್ನು ತೆಗೆಯುತ್ತಾರೆ ಎಂಬುದೆಲ್ಲ ಸುಳ್ಳು. ಸಿಎಂ ಬದಲಾವಣೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಆ ರೀತಿಯ ಬೆಳವಣಿಗೆ ಇದಿದ್ದರೆ ನನಗೆ ತಿಳಿಯುತ್ತಿತ್ತು. ಸುಮ್ಮನೆ ಊಹಾಪೋಹಗಳನ್ನು ಹರಡಬಾರದು. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.