– ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಗೈದು ಭಕ್ತಿ ಸಮರ್ಪಣೆ
ಪ್ರಯಾಗ್‌ರಾಜ್/ಹುಬ್ಬಳ್ಳಿ: ವಿಶ್ವಪ್ರಸಿದ್ಧ ಹಿಂದೂ ಧರ್ಮದ ಶ್ರೇಷ್ಠ ಪ್ರಯಾಗ್‌ರಾಜ್ (Prayag raj) ಮಹಾಕುಂಭದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಕುಟುಂಬ ಸಹಿತ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಗೈದಿದ್ದಾರೆ.
Advertisement
ತ್ರಿವೇಣಿ ಸಂಗಮದ ಪವಿತ್ರ ಗಂಗೆಯಲ್ಲಿ ಮುಳುಗೇಳುತ್ತಾ ತೀರ್ಥಸ್ನಾನ ಮಾಡಿದ ಸಚಿವರು, ಮಂತ್ರ ಪಠಣದೊಂದಿಗೆ ದೇವರಿಗೆ ನಮಸ್ಕರಿಸಿ, ಲೋಕದ ಸುಭಿಕ್ಷೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕುಟುಂಬ ಸಮೇತರಾಗಿ ವಿಶಿಷ್ಠ ಭಂಗಿಯ ಭಗವಾನ್ ಹನುಮ ದೇವಾಲಯ ಹಾಗೂ ಅಕ್ಷಯವತ್‌ಗೆ ತೆರಳಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ
Advertisement
Advertisement
ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮತ್ತು ಹಿಂದೂ ಧರ್ಮದ ಶ್ರೇಷ್ಠ ಆಧ್ಯಾತ್ಮಿಕ ಮಹೋತ್ಸವವೂ ಆಗಿರುವ ಈ ಮಹಾ ಕುಂಭಮೇಳದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರ ಇಡೀ ಕುಟುಂಬವೇ ಭಾಗಿಯಾಗಿ ಶ್ರದ್ಧಾಭಕ್ತಿ ಮೆರೆಯಿತು. ಸಚಿವರೊಂದಿಗೆ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ ಜೋಶಿ, ಅನನ್ಯಾ ಜೋಶಿ, ಅನುಷಾ ಜೋಶಿ ಹಾಗೂ ಸಹೋದರ ಗೋವಿಂದ ಜೋಶಿ-ಕಮಲಾ ಜೋಶಿ ದಂಪತಿ ಸೇರಿದಂತೆ ಮಕ್ಕಳು, ಮೊಮ್ಮಕ್ಕಳಾದಿಯಾಗಿ ಕುಟುಂಬದ ಸದಸ್ಯರೆಲ್ಲರೂ ಪುಣ್ಯಸ್ನಾನ ಗೈದು ಭಕ್ತಿ ಸಮರ್ಪಿಸಿದರು. ಇದನ್ನೂ ಓದಿ: 10ಕ್ಕೂ ಹೆಚ್ಚು ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
Advertisement
ಈ ವೇಳೆ ಪ್ರಯಾಗರಾಜ್‌ನಲ್ಲಿ ಮಾಧ್ಯಮಗಳೊಂದಿಗೆ ಮಹಾಕುಂಭದ ಅನನ್ಯ ಅನುಭವವನ್ನು ಹಂಚಿಕೊಂಡ ಜೋಶಿ, ಪ್ರಯಾಗ್‌ರಾಜ್ ಮಹಾ ಕುಂಭಮೇಳ ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ
ತ್ರಿವೇಣಿ ಸಂಗಮದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದ್ದು ನಮ್ಮ ಪುಣ್ಯ. ಇದು ನಮಗೆ ಅತ್ಯಂತ ಮಹತ್ವದ ಮತ್ತು ಭಕ್ತಿ ಸಮರ್ಪಣೆಯ ದೈವಿಕ ಕ್ಷಣವಾಗಿದೆ ಎಂದು ಖುಷಿಪಟ್ಟರು. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್
ಮಹಾಕುಂಭ ಒಂದು ಶ್ರೇಷ್ಠ ಆಧ್ಯಾತ್ಮಿಕ ಅನುಭವ ನೀಡುತ್ತದೆ. ಇಲ್ಲಿ ಪವಿತ್ರ ಸ್ನಾನ ಮಾಡುವುದು ಭವ್ಯವಾದ ಯಶಸ್ಸು, ನಂಬಿಕೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ತಮ್ಮ ಅನನ್ಯ ಅನುಭವವನ್ನು ಹಂಚಿಕೊಂಡರು. ಇದನ್ನೂ ಓದಿ: ಚಿನ್ನಾಭರಣ, ಹಣ ದೋಚಿ ಸಿಕ್ಕಿಬೀಳುವ ಭಯದಲ್ಲಿ ಡಿವಿಆರ್ ಹೊತ್ತೊಯ್ದ ಕಳ್ಳರು!
ಯೋಗಿಜಿ ವ್ಯವಸ್ಥೆ ಅದ್ಭುತ:
ಪ್ರಯಾಗರಾಜ್ ಮಹಾಕುಂಭದಲ್ಲಿ ಪ್ರಧಾನಿ ಮೋದಿಜಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಕೊಂಡಾಡಿದರು. ಇದನ್ನೂ ಓದಿ: ಪಾಕ್ ಬೆಡಗಿಗೆ ಕಾರವಾರ ನೌಕಾನೆಲೆಯ ಮಾಹಿತಿ, ಪ್ರತಿ ತಿಂಗಳು 5,000 ಜಮೆ - ಎನ್‌ಐಎಯಿಂದ ಇಬ್ಬರು ಅರೆಸ್ಟ್
ಸಾವಿರಾರು ವರ್ಷಗಳಿಂದ, ವೇದ-ಪುರಾಣಕಾಲದಿಂದ ಮಹಾ ಕುಂಭಮೇಳ ಆಚರಣೆಯಲ್ಲಿದೆ. ದೇಶದೆಲ್ಲೆಡೆಯಿಂದ ಕೋಟ್ಯಂತರ ಸಂಖ್ಯೆಯಲ್ಲಿ ಸಾಧು-ಸಂತರು, ಭಕ್ತರು ಆಗಮಿಸುತ್ತಿದ್ದಾರೆ. ಅತ್ಯಂತ ಶಾಂತಿ, ಸಂಯಮದಿಂದ ಪಾಲ್ಗೊಂಡು ಅವರವರ ಪೂಜಾ ಪದ್ಧತಿಯಲ್ಲಿ ಧಾರ್ಮಿಕ ಉತ್ಸವ ಆಚರಿಸಿ ಅಭೂತಪೂರ್ವವಾಗಿ ಯಶಸ್ವಿಗೊಳಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡೀ ದೇಶದ ಪೋಷಕರನ್ನು ನೀವು ಅವಮಾನಿಸಿದ್ದೀರಿ – ಯೂಟ್ಯೂಬರ್ ರಣವೀರ್ ಹೇಳಿಕೆಗೆ ಸುಪ್ರೀಂ ಕೆಂಡಾಮಂಡಲ
ನಕಾರಾತ್ಮಕವಾಗಿ ಆಲೋಚನೆ ಮಾಡುವವರು ಅದೇ ರೀತಿ ಪ್ರತಿಕ್ರಿಯಿಸುವುದು ಸಾಮಾನ್ಯ. ಆದರೆ, ಇಲ್ಲಿ ಸಕಾರಾತ್ಮಕ ಶಕ್ತಿಯೇ ಹೆಚ್ಚಿದೆ. ಸನಾತನ ಹಿಂದೂ ಧರ್ಮದ ಪ್ರಬಲ ಶಕ್ತಿ ಎಂಥದ್ದು ಎಂಬುದನ್ನು ಈ ಮಹಾಕುಂಭ ಪ್ರದರ್ಶಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ದೆಹಲಿ ಅಬಕಾರಿ ಹಗರಣ ಮೀರಿಸುತ್ತಿದೆ ರಾಜ್ಯದ ಲಿಕ್ಕರ್ ಸ್ಕ್ಯಾಮ್ – ಕಾಂಗ್ರೆಸ್‌ನಿಂದ ಲೂಟಿ ಎಂದ ಜೆಡಿಎಸ್