Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
Last updated: February 14, 2026 7:19 pm
Public TV
Share
3 Min Read
Priyank Kharge 1
SHARE

ಬೆಂಗಳೂರು: ಇ-ಸ್ವತ್ತು (E-Swathu) ಹೊಸ ನಿಯಮಗಳು ಜಾರಿಗೊಳ್ಳುವ ಮುನ್ನ ಸೃಜನೆಯಾಗಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ಗ್ರಾಮ ಪಂಚಾಯಿತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಇದರಿಂದ ತೊಂದರೆಗೊಳಗಾಗಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ರನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ಜಾರಿಗೆ ಬಂದ ದಿನಾಂಕಕ್ಕೆ ಮುಂಚಿತವಾಗಿ ಸೃಜನೆಯಾಗಿರುವ ಕಟ್ಟಡಗಳು ಮತ್ತು ನಿವೇಶನಗಳನ್ನು ಗ್ರಾಮ ಪಂಚಾಯಿತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದರಿಂದ ಬಾಧಿತರಾದ ವ್ಯಕ್ತಿಗಳು/ಸಂಸ್ಥೆಗಳು ಹಾಗೂ ಉಪಬಂಧಗಳನ್ನು ಜಾರಿಗೆ ತರುವಾಗ ಗ್ರಾಮ ಪಂಚಾಯಿತಿಯ ತೀರ್ಮಾನದಿಂದ ಬಾಧಿತರಾದ ವ್ಯಕ್ತಿಗಳು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಖರ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳನ್ವಯ, ಈ ಹಿಂದೆ ಜಾರಿಯಲ್ಲಿದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಪರಿಷ್ಕರಿಸಿ, 2025ರ ಡಿ.1 ರಂದು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನಿಡಲಾಗಿತ್ತು. ಅದರಂತೆ, 2025ರ ಏ.7 ಕ್ಕಿಂತ ಮುಂಚಿತವಾಗಿ ಸೃಜನೆಯಾಗಿರುವ ಕಟ್ಟಡಗಳು ಮತ್ತು ನಿವೇಶನಗಳಿಗೆ ಹಾಗೂ ಅಂತಹ ಆಸ್ತಿಗಳು ಪಂಚತಂತ್ರ ತಂತ್ರಾಂಶದಲ್ಲಿ ದಾಖಲೆಯಾಗಿರದಿದ್ದಲ್ಲಿ, 2- ಖಾತಾ ಪಡೆಯುವ ಉದ್ದೇಶದಿಂದ ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಹೊಸ ನಮೂನೆ-11ಬಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ಸಚಿವರು ಹೇಳಿದ್ದು, ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಇದುವರೆಗೆ 27,000 ಕ್ಕಿಂತಲೂ ಹೆಚ್ಚು ಹೊಸ ನಮೂನೆ-11ಬಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ 26,000 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವಿವರಿಸಿದ್ದಾರೆ.

ಹೊಸ ನಿಯಮಗಳನ್ವಯ, ಸದರಿ ಕಟ್ಟಡಗಳು ಮತ್ತು ನಿವೇಶನಗಳು 2025ರ ಏ.7 ಕ್ಕಿಂತ ಮುಂಚಿತವಾಗಿ ಸೃಜನೆಯಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ, ಇಂತಹ ಅರ್ಜಿಗಳನ್ನು ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿಗಳ ಮೂಲಕ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತಿದೆ. ನಮೂನೆ-11ಬಿ ಇ-ಖಾತಾಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನಾ ಪ್ರಕ್ರಿಯೆಯನ್ನು ತಂತ್ರಾಂಶದಲ್ಲಿ ಅಳವಡಿಸಿರುವ ಕಾರಣ, ಹೊಸ ನಮೂನೆ-11ಬಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಉಂಟಾಗಿದೆ. ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅನುಮೋದನೆ ನೀಡಿದ ನಂತರ, ಗ್ರಾಮ ಪಂಚಾಯಿತಿಗಳಿಂದ 15 ಕೆಲಸ ದಿನಗಳ ಕಾಲಾವಧಿಯಲ್ಲಿ ನಮೂನೆ-11ಬಿ ಗಳನ್ನು ವಿತರಿಸಲಾಗುವುದು. ಈಗಾಗಲೇ ಸಲ್ಲಿಕೆಯಾಗಿರುವ ಹೊಸ ನಮೂನೆ-11ಬಿ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಋಣಭಾರ ಪ್ರಮಾಣ ಪತ್ರ ಸಲ್ಲಿಕೆಯ ಬಗ್ಗೆ ಸಚಿವರು ಮಾಹಿತಿ ಹಂಚಿಕೊಂಡಿದ್ದು ವಿವರಗಳು ಹೀಗಿವೆ:
ಇ-ಸ್ವತ್ತು ಅರ್ಜಿದಾರರ ನೋಂದಾಯಿತ ಪತ್ರವು (Registered Deed) 2004ರ ಏ.1 ಕ್ಕಿಂತ ಮುಂಚಿತವಾಗಿದ್ದರೆ, ಅರ್ಜಿದಾರರು ಎರಡು ಋಣಭಾರ ಪ್ರಮಾಣಪತ್ರ (EC) ದಾಖಲೆಗಳನ್ನು ಪಡೆಯಬೇಕಾಗುತ್ತದೆ:
1. ಅರ್ಜಿದಾರರು ನೋಂದಣಿ ದಿನಾಂಕಕ್ಕಿಂತ ಕನಿಷ್ಠ ಒಂದು ದಿನ ಮೊದಲ ದಿನಾಂಕದಿಂದ 2004ರ ಮಾ.31 ರವರೆಗಿನ ಋಣಭಾರ ಪ್ರಮಾಣಪತ್ರ (EC) ಹಾಗೂ, 2004ರ ಏ.1 ರಿಂದ ಕನಿಷ್ಠ ಅರ್ಜಿ ಸಲ್ಲಿಸುವವರೆಗಿನ ಇಸಿ (EC).
ಉದಾಹರಣೆ – 1
ಅರ್ಜಿದಾರರ ನೋಂದಾಯಿತ ಪತ್ರವು 1998ರ ಆ.17 ರಂದು ನೋಂದಣಿಯಾಗಿದ್ದರೆ, 1998ರ ಆ.16 ರಿಂದ 2004ರ ಮಾ.31 ರವರೆಗಿನ ಋಣಭಾರ ಪ್ರಮಾಣಪತ್ರ (EC) ಪಡೆದುಕೊಳ್ಳುವುದು ಹಾಗೂ ದಿನಾಂಕ 2004ರ ಏ.1 ರಿಂದ ಅರ್ಜಿ ಸಲ್ಲಿಸುವವರೆಗಿನ ಋಣಭಾರ ಪ್ರಮಾಣಪತ್ರ (EC) ಪಡೆಡುಕೊಳ್ಳುವುದು.
ಉದಾಹರಣೆ 2.
ನೋಂದಾಯಿತ ಪತ್ರವು 2004ರ ಡಿ.13 ರಂದು ನೋಂದಣಿಯಾಗಿದ್ದರೆ, 2004ರ ಡಿ.12 ರಿಂದ ಅರ್ಜಿ ಸಲ್ಲಿಸುವವರೆಗಿನ ಒಂದೇ ಋಣಭಾರ ಪ್ರಮಾಣಪತ್ರ (EC) ಪಡೆದುಕೊಳ್ಳುವುದು.
ಉದಾಹರಣೆ 3
ನೋಂದಾಯಿತ ಪತ್ರವು 2025ರ ಡಿ.13 ರಂದು ನೋಂದಣಿಯಾಗಿದ್ದರೆ, 2025 ರ ಡಿ.12 ಅರ್ಜಿ ಸಲ್ಲಿಸುವವರೆಗಿನ ಒಂದೇ ಋಣಭಾರ ಪ್ರಮಾಣಪತ್ರ (EC) ಪಡೆದುಕೊಳ್ಳುವುದು.

ಅರ್ಜಿದಾರರು ಸಲ್ಲಿಸಿದ ಋಣಭಾರ ಪ್ರಮಾಣಪತ್ರ (EC) ದಾಖಲೆಯಲ್ಲಿ ನಿಮ್ಮ ನೋಂದಾಯಿತ ಪತ್ರದ ಸಂಖ್ಯೆ ಇಲ್ಲವಾದಲ್ಲಿ, ಇ-ಸ್ವತ್ತು ಖಾತೆಗೆ ಸಲ್ಲಿಸಿದ ಅರ್ಜಿಯನ್ನು ಮುಂದಿನ ಪ್ರಕ್ರಿಯೆಗೆ ತೆಗೆದುಕೊಳ್ಳಲಾಗುವುದಿಲ್ಲ. ಮೇಲಿನ ನಿಯಮಗಳ ಅನುಸಾರ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

TAGGED:bengaluruE-SwathuPriyank Khargeಇ-ಸ್ವತ್ತುಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Indigo Flight
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

Public TV
By Public TV
1 hour ago
PES University
Bengaluru City

ವಿದ್ಯಾರ್ಥಿಗೆ ಭಯೋತ್ಪಾದಕ ಪಟ್ಟ ಕಟ್ಟಿದ ಆರೋಪ – ಪಿಇಎಸ್ ವಿವಿ ಉಪನ್ಯಾಸಕ ಅಮಾನತು

Public TV
By Public TV
2 hours ago
VIjayapura
Districts

ಒಂದು ಬಾಟಲ್‌ ಕೊಟ್ಟರೆ ಕೆಳಗೆ ಬರ್ತಿನಿ  – ಟವರ್ ಹತ್ತಿ ಕುಡುಕನ ಹುಚ್ಚಾಟ 

Public TV
By Public TV
2 hours ago
MB Patil
Bengaluru City

ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು: ಎಂ.ಬಿ ಪಾಟೀಲ್‌

Public TV
By Public TV
2 hours ago
Balendra Shah Oath Taking As Nepal PM
Latest

ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ

Public TV
By Public TV
2 hours ago
Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?