ಘರ್‌ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ, ಅರ್ಧ ಜೆಡಿಎಸ್‌ ಖಾಲಿಯಾಗುತ್ತೆ: ಪ್ರಿಯಾಂಕ್‌ ಖರ್ಗೆ

Public TV
2 Min Read
Priyank Kharge 1 2

ಬೆಂಗಳೂರು: ಘರ್‌ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ ಮತ್ತು ಅರ್ಧ ಜೆಡಿಎಸ್‌ ಖಾಲಿಯಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಟಾಂಗ್‌ ಕೊಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವಲಸಿಗರ ವಿಚಾರ ಸಾಕಷ್ಟು ಚರ್ಚೆ ಆಗಿದೆ. ಡಿಸಿಎಂ ಹಾಗೂ ಸಿಎಂ ಈ ಬಗ್ಗೆ ತಿಳಿಸಿದ್ದಾರೆ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿದರೆ ಯಾವುದೇ ಕಂಡಿಷನ್ ಇಲ್ಲದೆ ಬಂದರೆ ಸ್ವಾಗತ ಇದೆ. ನಾವು ಆಪರೇಷನ್ ಹಸ್ತ ಮಾಡುವುದಕ್ಕೆ ಹೊರಟಿಲ್ಲ. ಬಿಜೆಪಿ, ಜೆಡಿಎಸ್ ಒಡೆಯಲು ಹೋಗುತ್ತಿಲ್ಲ. ಯಾರ ಯಾರ ಅಸ್ತಿತ್ವ ಏನೂ ಅನ್ನೋದನ್ನು ಜನರೇ ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನವರು ಅವರವರ ಅಸ್ತಿತ್ವ ಕಾಪಾಡಿಕೊಂಡು ಹೋದರೆ ಸಾಕು ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಸೋಲಿನ ಬಳಿಕ ದಳಪತಿಗೆ ಶಾಕ್ – ಪುಟ್ಟರಾಜುಗೆ ‘ಕೈ’ ನಾಯಕರಿಂದ ಗಾಳ

BS YEDIYURAPPA

ಚೆಲುವರಾಯಸ್ವಾಮಿಗೆ ಕೆಲವರು ಸಂಪರ್ಕದಲ್ಲಿ ಇರಬಹುದು. ಕೆಲವರು ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ನಮ್ಮ ಭಾಗಕ್ಕೆ ದನ ಕಾಯುವ ಮಂತ್ರಿಗೆ ಬಿಜೆಪಿಯವರು ಖಾಯಂ ಸ್ಥಾನ ಕೊಡುತ್ತಿದ್ದರು. ಘರ್ ವಾಪ್ಸಿ ಅಂತ ಮಾಡೋಕೆ ಹೋದರೆ ಅರ್ಧ ಬಿಜೆಪಿ, ಅರ್ಧ ಜೆಡಿಎಸ್ ಖಾಲಿಯಾಗುತ್ತದೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪರನ್ನು ಬಿಜೆಪಿಯವರು ಹೇಗೆ ನಡೆಸಿಕೊಂಡರು ಅಂತ ಗೊತ್ತಿದೆ. ಈಗ ಅಲ್ಲಿ ಕ್ಯಾಪ್ಟನ್ ಆಗೋಕೂ ಯಾರೂ ರೆಡಿ ಇಲ್ಲ. ಕ್ಯಾಪ್ಟನ್ನೂ ಇಲ್ಲ. ಬಿಎಸ್‌ವೈದು ಈಗ ಮಾತು ನಡೆಯುತ್ತಿದ್ದರೆ ಇಷ್ಟು ಜನ ಬಿಜೆಪಿಯವರು ಬಿಟ್ಟು ಬರ್ತಾ ಇದ್ರಾ? ಚುನಾವಣೆ ಬಂದಾಗ ಯಡಿಯೂರಪ್ಪ ಹೆಗಲ ಮೇಲೆ ಕೈ ಹಾಕಿಕೊಂಡು ಮಾತನಾಡಿದ್ದರು. ಯಡಿಯೂರಪ್ಪ ಹೇಳಿದವರಿಗೆ ಎಷ್ಟು ಜನರಿಗೆ ಟಿಕೆಟ್ ಕೊಟ್ಟರು ಹೇಳಿ? ಯಡಿಯೂರಪ್ಪಗೆ ಕಣ್ಣೀರಿ ತರಿಸಿ ಇಳಿಸಿದ್ದನ್ನು ಎಲ್ಲರೂ ನೋಡಿದ್ದಾರೆ. ಬಿಜೆಪಿ ಈಗ ಮುಳುಗುತ್ತಿರುವ ಹಡಗು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿಯ ಒಡಲು

ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಹಿರಿಯ ದಲಿತ ಸಚಿವರ ವಿರೋಧ ಕುರಿತು ಪ್ರತಿಕ್ರಿಯಿಸಿ, ಸುಧಾಮ್ ದಾಸ್ ಅವರಿಗೆ ಕೊಡಲೇಬಾರದು ಅಂತ ಏನೂ ಹೇಳಿಲ್ಲ. ಪರಿಶೀಲಿಸಿ ಅಂತ ಪತ್ರ ಬರೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಮೂರು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಬಂದಿದ್ದಾರೆ ಅನ್ನೋದು ಬೇಡ. ಪಕ್ಷದಲ್ಲಿ ಅವರೂ ಶ್ರಮ ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಹೇಳಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article