– ಹೆಣದ ಮೇಲೆ ಹಣ ಮಾಡೋರಿಗೆ ರಾಜೀನಾಮೆ ಕೇಳುವ ನೈತಿಕತೆ ಇದೆಯೇ ಎಂದ ಸಚಿವ
ನವದೆಹಲಿ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಈ ಬೆನ್ನಲ್ಲೇ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ.
Advertisement
ರಾಜ್ಯ ಹೈಕೋರ್ಟ್ ತೀರ್ಪಿನ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಇದು ನಿರೀಕ್ಷಿತ, ತನಿಖಾ ಸಂಸ್ಥೆಗಳಿಂದ ಸಾಧ್ಯವಾಗದ ಕಾರಣ, ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಮೋದಿ, ಅಮಿತ್ ಶಾ, ರಾಜ್ಯಪಾಲರು ಎಲ್ಲರೂ ಅವರ ಬಳಿಕ ಇರಬಹುದು. ನಮ್ಮ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಇದೆ. ವೈಯುಕ್ತಿಕವಾಗಿ ಆಶ್ಚರ್ಯವಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಕೊಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಗ್ಯಾರಂಟಿ: ಛಲವಾದಿ
Advertisement
Advertisement
ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಏನೇಲ್ಲ ಆಗಿದೆ? ದೆಹಲಿ, ಜಾರ್ಖಂಡ್ ಕೇಸ್‌ನಲ್ಲಿ ಏನಾಯಿತು? ಸುಪ್ರೀಂ ಕೋರ್ಟ್ ಛೀಮಾರಿ ಹಾಕಿಲ್ವಾ? ಇವರಿಗೆ ರಾಜೀನಾಮೆ ಕೇಳುವ ನೈತಿಕತೆ ಇದಿಯಾ? ಆಪರೇಷನ್ ಕಮಲ, ಹೆಣದ ಮೇಲೆ, ಕಸದ ಮೇಲೆ ಹಣ ಮಾಡೊದು ಇವರು. ದಲಿತರ ಮೇಲೆ ದೌರ್ಜನ್ಯ ಮಾಡುವುದು ಇವರು ಎಂದು ತಿವಿದಿದ್ದಾರೆ. ಇದನ್ನೂ ಓದಿ: ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಜಯ – ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ವಿಜಯೇಂದ್ರ
Advertisement
ವಿಜಯೇಂದ್ರ ಮೊದಲು ರಾಜೀನಾಮೆ ನೀಡಬೇಕಾಗುತ್ತದೆ. ಅವರ ತಂದೆ ಮೇಲೆ ಪೋಕ್ಸೋ ಕೇಸ್ ಇದೆ. ಅವರು ರಾಜೀನಾಮೆ ಕೊಡಬೇಕು. ತನಿಖಾ ಸಂಸ್ಥೆಗಳು ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಒತ್ತಾಯ ಮಾಡಿಲ್ವಾ? ನಾವು ಎರಡು ನ್ಯಾಯಲಯಕ್ಕೆ ಹೋಗಲು ತಯಾರಿದ್ದೇವೆ? ಸುಪ್ರೀಂ ಕೋರ್ಟ್ ಮತ್ತು ಜನತಾ ನ್ಯಾಯಾಲಯಕ್ಕೆ ಹೋಗಲು ತಯಾರಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್