ತುಮಕೂರು: ಸಹಕಾರಿ ಸಚಿವ ಕೆ.ಎನ್ ರಾಜಣ್ಣ (Minister K N Rajanna) ಅವರ ಕಣ್ಣಿ (Eye) ಗೆ ಪಟಾಕಿ ಕಿಡಿ ಹಾರಿ ಗಾಯಗೊಂಡ ಘಟನೆ ಪಟ್ಟದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್ ರಾಜಣ್ಣ ಅವರು ಇಂದು ಶಕ್ತಿ ಯೋಜನೆ (Shakti Yojana) ಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು ಹಿತೈಷಿಗಳು ಕಾಂಗ್ರೆಸ್ (Congress) ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಹೂಮಾಲೆ ಹಾಕಿ ಅಭಿನಂದಿಸಿದರು. ಬಳಿಕ ಸಮೀಪದಲ್ಲೇ ಪಟಾಕಿ ಸಿಡಿಸಿದರು. ಇದನ್ನೂ ಓದಿ: 14ರ ಹಿಂದೂ ಬಾಲಕಿ ಕಿಡ್ನ್ಯಾಪ್ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್ ಕೋರ್ಟ್ ನಿರಾಕರಣೆ
ಇತ್ತ ಯಾಕೋ ಸಚಿವರು ತಮ್ಮ ಕನ್ನಡಕವನ್ನೊಮ್ಮೆ ತೆಗೆದರು. ಇದೇ ವೇಳೆ ಪಟಾಕಿಯ ಕಿಡಿ ನೇರವಾಗಿ ಬಲಗಣ್ಣಿನತ್ತ ಹಾರಿದೆ. ಕೂಡಲೇ ಸಚಿವರನ್ನು ಎಂ.ಎಂ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಕೊಡಿಸಲಾಯಿತು, ಬಳಿಕ ಅವರು ಹಾಸನಕ್ಕೆ ತೆರಳಿದರು.