ಬೆಂಗಳೂರು: ಸಹಕಾರ ಮಂತ್ರಿ ಕೆಎನ್ ರಾಜಣ್ಣ (KN Rajanna) ವಜಾ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಆಪ್ತ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ರಂಗನಾಥ್ (Kunigal Ranganath) ಬಾಂಬ್ ಸಿಡಿಸಿದ್ದಾರೆ.
ಇದು ಸಚಿವ ಸಂಪುಟ ಪುನಾರಚನೆ ಇರಬಹುದು ಅಥವಾ ಡಿಸಿಸಿ ಬ್ಯಾಂಕ್ ಚುನಾವಣೆ ಇರಬಹುದು. ಈ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್
ರಾಜಣ್ಣ ರಾಜೀನಾಮೆಯಿಂದ ತುಮಕೂರು ಜಿಲ್ಲೆಗೆ ಆಗುವ ಪರಿಣಾಮದ ಬಗ್ಗೆ ಈಗಲೇ ನಾನು ಏನು ಹೇಳಲಾರೆ. ಇದು ಸಿಎಂ ನಿರ್ಧಾರವೂ ಇರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದಲೇ ರಾಜಣ್ಣ ಉಚ್ಚಾಟನೆ? – ಆಪ್ತನನ್ನು ಉಳಿಸಲು ಸಿಎಂ ಕಸರತ್ತು
ಹೈಕಮಾಂಡ್ ಖಡಕ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಆಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ.