ಬೆಂಗಳೂರು: ನಮ್ಮ ಸರ್ಕಾರ ವಿಪಕ್ಷದ ಯಾವ ನಾಯಕರ ದೂರವಾಣಿಯನ್ನು ಕದ್ದಾಲಿಸಿಲ್ಲ. ಕೇಂದ್ರ ಸರ್ಕಾರವೇ ನಮ್ಮ ಸುಮಾರು 35 ಮುಖಂಡರ ಹಾಗೂ ಸಚಿವರ ಫೋನ್ ಕದ್ದಾಲಿಕೆ ಮಾಡುತ್ತಿದೆ ಅಂತ ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ನೀಡಿರೋ ಹೇಳಿಕೆ ಸುಳ್ಳಾಗಿದೆ. ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ. ಅಲ್ಲದೆ ಐಟಿ, ಇಡಿ, ಸಿಬಿಐ, ರಿಸರ್ವ್ ಬ್ಯಾಂಕ್ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಪಿತೂರಿ ನಡೆಸುತ್ತಿದೆ ಅಂತ ಕಿಡಿಕಾರಿದ್ರು.
Advertisement
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸಚಿವರ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತೇವೆಂಬ ಬಿಎಸ್‍ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಬಳಿ ದಾಖಲೆ ಇದ್ರೆ ಬಿಡುಗಡೆ ಮಾಡಲಿ. ನಮ್ಮ ಸಚಿವರ ವಿರುದ್ಧ ಆರೋಪ ಇದ್ರೆ ಲೋಕಾಯುಕ್ತ ಸಂಸ್ಥೆ ಇದೆ ಅಲ್ಲಿ ಹೊಗಿ ದೂರು ಕೊಡಲಿ. ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಮೊದಲು ತಮ್ಮ ಮೇಲಿರುವ ಪ್ರಕರಣದ ಕುರಿತು ಜನತೆಗೆ ಉತ್ತರ ನೀಡಲಿ. ಆ ಬಳಿಕ ನಮ್ಮ ಬಗ್ಗೆ ಮಾತನಾಡಲಿ ಅಂತ ಹೇಳಿದ್ರು.
Advertisement
ಇನ್ನು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ಸುಳಿವು ಸಿಕ್ಕಿದೆ. ಸಾಕ್ಷ್ಯವನ್ನು ಸಂಗ್ರಹಿಸುತ್ತಿದ್ದು, ಶೀಘ್ರವಾಗಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ರು.