ಮಂಗಳೂರು: ಕರಾವಳಿಯಲ್ಲಿ ಹಿಂದೂಗಳು, ಸಂಘ ಪರಿವಾರದವರು ಹತ್ಯೆ ಮಾಡುತ್ತಿದ್ದಾರೆ ಅಂತ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಬಂದಿದ್ದ ವೇಳೆ ಬಶೀರ್ ಸಾವಿನ ಕುರಿತು ಸುದ್ದಿಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ರೈ, ಹಿಂದೂ ವಿರೋಧಿ ನೀತಿಯನ್ನು ಸಿಎಂ ಎದುರೇ ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಹೀಗಂದ್ರು
Advertisement
Advertisement
ಕರಾವಳಿಯಲ್ಲಿ ಹಿಂದೂಗಳಿಂದಲೇ ಹತ್ಯೆ ನಡೆಯುತ್ತಿವೆ. ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಈ ಹತ್ಯೆಗಳನ್ನು ಮಾಡಲಾಗುತ್ತಿದೆ ಎಂದು ನೇರವಾಗಿ ಆರೋಪಿಸಿದ್ರು. ಇದನ್ನೂ ಓದಿ: ಬಶೀರ್ ಹತ್ಯೆ ಖಂಡಿಸಿ ಬಿಜೆಪಿಯವರೇಕೆ ಬೀದಿಗಿಳಿದಿಲ್ಲ- ಸಿಎಂ ಪ್ರಶ್ನೆ
Advertisement
ಬಷೀರ್ ಗೆ ಸಂತಾಪ ಸೂಚಿಸಿದ ಅವರು, ಈ ಹತ್ಯೆಗಳಲ್ಲಿ ಕಾಣದ ಕೈಗಳ ಕೈವಾಡ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಇಂತಹ ಕೃತ್ಯ ಆಗುತ್ತಿದೆ. ಕಾಣದ ಕೈಗಳ ಮೂಲ ಹುಡುಕುತ್ತೇವೆ. ಸಂಘಪರಿವಾದವರು ಪ್ರಚೋದನಕಾರಿ ಹೇಳಿಕೆ ನೀಡ್ತಾರೆ. ಹತ್ಯೆಯಲ್ಲಿ ಕಾಂಗ್ರೆಸ್ ಪಾತ್ರ ಇಲ್ಲ ಎಂದು ಹೇಳಿದ್ದಾರೆ.
Advertisement
ಬಶೀರ್ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಡಿಸಿ ಸಸಿಕಾಂತ್ ಸೆಂಥಿಲ್ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಘೋಷಣೆ ಮಾಡಿದ್ದಾರೆ.
ಜ.3ರಂದು ಮಧ್ಯಾಹ್ನ 1.30ರ ವೇಳೆಗೆ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ದೀಪಕ್ ರಾವ್ ಅವರನ್ನು ಅಡ್ಡಗಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಂದೇ ರಾತ್ರಿ 11.30ರ ಸುಮಾರಿಗೆ ಫಾಸ್ಟ್ ಫುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಶೀರ್(47) ತನ್ನ ಮನೆಯತ್ತ ತೆರಳುತ್ತಿದ್ದರು. ಈ ವೇಳೆ 3 ಬೈಕ್‍ನಲ್ಲಿ ಬಂದ 7 ಜನರ ತಂಡ ಏಕಾಏಕಿ ಬಶೀರ್ ಮೇಲೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದರು. ಗಂಭಿರ ಗಾಯಗೊಂಡು ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಶೀರ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
https://www.youtube.com/watch?v=dxBldKE4p2w
https://www.youtube.com/watch?v=IlGszWsi80U
https://www.youtube.com/watch?v=ZWFlu1dmwi0