– ಸಚಿವ ರಾಯರೆಡ್ಡಿಯಿಂದ ಸಂವಿಧಾನಕ್ಕೆ ಅಪಚಾರ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D K Shivakumar) ನೇತೃತ್ವದ ಸರ್ಕಾರದಲ್ಲಿ ಅತಿ ಬುದ್ದಿವಂತ ಸಚಿವ ಬಸವರಾಜ ರಾಯರೆಡ್ಡಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ತಾವು ಪ್ರಮಾಣ ವಚನ ಮಾಡಿರುವ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬೊಮ್ಮಾಯಿ, ಸಂವಿಧಾನದ ಮೂಲ ಆಶಯ ಧರ್ಮನಿರಪೇಕ್ಷತೆಯನ್ನು ಪ್ರತಿಪಾದಿಸುತ್ತದೆ. ಆದರೆ, ಸಚಿವರಾಗಿ ಒಂದು ಧರ್ಮ ಮತ್ತೊಂದು ಧರ್ಮಕ್ಕಿಂತ ಶ್ರೇಷ್ಠ ಎಂಬ ರೀತಿಯಲ್ಲಿ ಮಾತನಾಡಿರುವುದು ಇಸ್ಲಾಮೇತರ ಧರ್ಮೀಯರ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @DKShivakumar ಅವರ ಸರ್ಕಾರದಲ್ಲಿ ಅತಿ ಬುದ್ದಿವಂತ ಸಚಿವ ಬಸವರಾಜ ರಾಯರೆಡ್ಡಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ತಾವೂ ಪ್ರಮಾಣ ವಚನ ಮಾಡಿರುವ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ.
ಸಂವಿಧಾನದ ಮೂಲ ಆಶಯ ಧರ್ಮ ನಿರಪೇಕ್ಷತೆಯನ್ನು ಹೇಳಿದೆ. ಒಬ್ಬ ಸಚಿವರಾಗಿ ಒಂದು ಧರ್ಮ ಇನ್ನೊಂದು ಧರ್ಮಕ್ಕಿಂತ ಶ್ರೇಷ್ಟ ಎನ್ನುವ ಮಾತನಾಡುವ…
— Basavaraj S Bommai (@BSBommai) August 31, 2026
ರಾಯರೆಡ್ಡಿ ಅವರ ಹೇಳಿಕೆಯಿಂದ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಇಂತಹ ಹೇಳಿಕೆ ಸಚಿವರಿಂದ ಬರಬಾರದು ಎಂದು ಅವರು ಹೇಳಿದ್ದಾರೆ.ಇದನ್ನೂ ಓದಿ: ಭೀಕರ ಪ್ರಳಯದ ಸುಳಿಯಲ್ಲಿ ನೇಪಾಳ – 903 ಮಂದಿ ಬಲಿ, 4 ಸಾವಿರಕ್ಕೂ ಅಧಿಕ ಜನರು ಕಣ್ಮರೆ
ರಾಯರೆಡ್ಡಿ ಅವರು ಕೂಡಲೇ ಕ್ಷಮಾಪಣೆ ಕೇಳಬೇಕು. ಇಲ್ಲವಾದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ನೀರು ಹರಿಸುತ್ತಿದೆಯಲ್ಲ? – ತಮಿಳುನಾಡು ವಾದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ
