ಅಬುಧಾಬಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯ ಸ್ಥಳಕ್ಕೆ ಭೇಟಿ ನೀಡಿದರು. ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹಿಂದೂ ದೇವಾಲಯ ಇದಾಗಿದೆ.
ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗೆ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ಕ್ಕೆ ಆಗಿಸಿರುವ ಎಸ್.ಜೈಶಂಕರ್ ಅವರು ದೇವಾಲಯ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು. ʼಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ ಇದುʼ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂನ ತಲೆಗೆ 25 ಲಕ್ಷ ನಗದನ್ನು ಘೋಷಿಸಿದ ಎನ್‍ಐಎ
Advertisement
On Ganesh Chaturthi, blessed to visit the @BAPS Hindu temple under construction in Abu Dhabi.
Glad to see the rapid progress and deeply appreciate the devotion of all involved. Met the BAPS team, community supporters and devotees and workers at the site. pic.twitter.com/7ZezrfvkuR
— Dr. S. Jaishankar (@DrSJaishankar) August 31, 2022
Advertisement
ಈ ಕುರಿತು ಟ್ವೀಟ್ ಮಾಡಿರುವ ಜೈಶಂಕರ್, ಗಣೇಶ ಚತುರ್ಥಿಯಂದು ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದೆ. ತ್ವರಿತ ಪ್ರಗತಿಯನ್ನು ನೋಡಲು ಸಂತೋಷವಾಗಿದೆ. ದೇವಾಲಯ ನಿರ್ಮಾಣ ಜವಾಬ್ದಾರಿ ಹೊತ್ತಿರುವ BAPS ತಂಡ, ಭಕ್ತರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಸಂತೋಷವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
Advertisement
Delighted to meet HH Sheikh Nahyan bin Mabarak Al Nahyan, Minister of Tolerance and Co-existence.
Appreciated his strong support for the Indian community, our yoga activities, cricket and cultural cooperation. pic.twitter.com/xmjdTG1mxs
— Dr. S. Jaishankar (@DrSJaishankar) August 31, 2022
Advertisement
ಸಚಿವ ಶೇಖ್ ನಹ್ಯಾನ್ ಬಿನ್ ಮಬಾರಕ್ ಅಲ್ ನಹ್ಯಾನ್ ಅವರನ್ನು ಜೈಶಂಕರ್ ಭೇಟಿ ಮಾಡಿದರು. ಅಲ್ಲಿರುವ ಭಾರತೀಯ ಸಮುದಾಯದ ಯೋಗ ಚಟುವಟಿಕೆಗಳು, ಕ್ರಿಕೆಟ್ ಮತ್ತು ಸಾಂಸ್ಕೃತಿಕ ಸಹಕಾರಕ್ಕಾಗಿ ಅಪಾರ ಬೆಂಬಲ ನೀಡುತ್ತಿರುವುದನ್ನು ಶ್ಲಾಘಿಸಿದರು. ಇದನ್ನೂ ಓದಿ: ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!
55,000 ಚದರ ಮೀಟರ್ ಜಾಗದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಈ ರಚನೆಯನ್ನು ಭಾರತೀಯ ದೇವಾಲಯದ ಕುಶಲಕರ್ಮಿಗಳ ಕೈಯಿಂದ ಕೆತ್ತನೆಯಾಗುತ್ತಿದೆ. ಇದು ಮಧ್ಯಪ್ರಾಚ್ಯದಲ್ಲಿ ಮೊದಲ ಸಾಂಪ್ರದಾಯಿಕ ಹಿಂದೂ ಕಲ್ಲಿನ ದೇವಾಲಯವಾಗಲಿದೆ.