ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ (Odisha Train Accident) ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ (Santosh Lad) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ
ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ. ಇದನ್ನೂ ಓದಿ: Odisha Train Tragedy; ಪುಣ್ಯಕ್ಷೇತ್ರಕ್ಕೆ ಹೊರಟಿದ್ದ ಚಿಕ್ಕಮಗಳೂರಿನ 110 ಮಂದಿ ಯಾತ್ರಾರ್ಥಿಗಳು ಸೇಫ್