ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವೊಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಕೈ ಜೋಡಿಸುವ ನಿಟ್ಟಿನಲ್ಲಿ ಮುಜರಾಯಿ ಹಜ್ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ಪ್ರಧಾನಿ ಅವರಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನು ಉಡುಗೊರೆಯಾಗಿ ನೀಡಿದರು.
Advertisement
ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Sangolli Rayanna) ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯಲ್ಲಿ ಸ್ಥಳೀಯ ಕಲಾವಿದರಿಂದ ನಿರ್ಮಿಸಲಾಗಿರುವ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಯಿತು.
Advertisement
Advertisement
ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಸಂತೋಷದಿಂದ ಅದನ್ನು ಸ್ವೀಕರಿಸಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ವಿಜಯನಗರ ಸಾಮ್ರಾಜ್ಯದ ಅವಧಿಯ ಈ ಕಲೆ ಇನ್ನಷ್ಟು ಪ್ರಚಾರ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯ ಎಂದು ಸಚಿವರು ತಿಳಿಸಿದರು.