ಬೆಂಗಳೂರು: ಟೀಕೆಯ ಬಳಿಕ ಎಚ್ಚೆತ್ತು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಬೆಳಗಾವಿಯ ಪುಂಡರ ಕೃತ್ಯವನ್ನು ಖಂಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಅವರು, ಬೆಳಗಾವಿಯ ಆನಗೋಳದಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಭಗ್ನಗೊಳಿಸಿ, ವಿಕೃತಿ ಮೆರೆದಿರುವ ಘಟನೆ ಸಹಿಸಲಾಗದು. ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮಾಜಿಯ ಬಲಗೈ ಬಂಟನಾಗಿ, ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಇದನ್ನೂ ಓದಿ: MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್
Advertisement
ನಾಡಿನ ಹೆಮ್ಮೆಯ ಪುತ್ರ ರಾಯಣ್ಣನ ಗೌರವಕ್ಕೆ ಚ್ಯುತಿ ತರುವ ಇಂತಹ ಹೀನ ಕೃತ್ಯ ಶಿಕ್ಷಾರ್ಹ ಅಪರಾಧ.
ತಿಳಕವಾಡಿ ಪೋಲಿಸರು ಈಗಾಗಲೇ ಪ್ರಕರಣ ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾನು ಸಹ ಒತ್ತಾಯಿಸುತ್ತೇನೆ. (2/2)#SangolliRayanna
— Shashikala Jolle (@ShashikalaJolle) December 18, 2021
Advertisement
ನಾಡಿನ ಹೆಮ್ಮೆಯ ಪುತ್ರ ರಾಯಣ್ಣನ ಗೌರವಕ್ಕೆ ಚ್ಯುತಿ ತರುವ ಇಂತಹ ಹೀನ ಕೃತ್ಯ ಶಿಕ್ಷಾರ್ಹ ಅಪರಾಧ. ತಿಳಕವಾಡಿ ಪೋಲಿಸರು ಈಗಾಗಲೇ ಪ್ರಕರಣ ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾನು ಸಹ ಒತ್ತಾಯಿಸುತ್ತೇನೆ ಎಂದು ಬರೆದಿದ್ದಾರೆ.
Advertisement
ಪ್ರಕರಣದ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಗೃಹ ಸಚಿವರಾದ ಶ್ರೀ @JnanendraAraga ಅವರಿಗೆ ಮನವಿ ಮಾಡುತ್ತೇನೆ. #ChhatrapatiShivajiMaharaj
— Shashikala Jolle (@ShashikalaJolle) December 18, 2021
Advertisement
ಇದಕ್ಕೂ ಮೊದಲು ಜೊಲ್ಲೆ ಬೆಂಗಳೂರಿನಲ್ಲಿ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆಯನ್ನು ಖಂಡಿಸಿದ್ದರು. ತಾಯ್ನಾಡಿನ ರಕ್ಷಣೆಗಾಗಿ ಹಾಗೂ ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ ಹೆಮ್ಮೆಯ ನಾಯಕ ಶಿವಾಜಿ ಮಹಾರಾಜರು. ಆದರೆ ಇಂತಹ ಅಪ್ರತಿಮ ವೀರರ ಪ್ರತಿಮೆಗೆ ಮಸಿ ಬಳಿದಿರುವುದು ಆಪಾದನೀಯ. ಪ್ರಕರಣದ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾನ್ಯ ಗೃಹ ಸಚಿವರಾದ ಅರಗ ಬಳಿ ಅವರಿಗೆ ಮನವಿ ಮಾಡುತ್ತೇನೆ.