ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಪರಿಹಾರಕ್ಕೆ ಸ್ವಚ್ಛ ಮಂದಿರ ಅಭಿಯಾನ

Public TV
3 Min Read
Minister Shashikala Jolle to launch Swachh Mandira Abhiyan 2

ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ (Temple) ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ(Swachh Mandira Abhiyan) ಉದ್ಘಾಟನೆಗೆ ಸಿದ್ದವಾಗಿದೆ.

ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ (Shashikala Jolle) ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ(Nimishamba Temple) ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ (Rohini Sindhuri) ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ. ಸಚಿವರಾದ ಶಶಿಕಲಾ ಜೊಲ್ಲೆ ಅವರು ದೇವಸ್ಥಾನಗಳಲ್ಲಿ ಸ್ವಚ್ಚ ಪರಿಸರವಿಲ್ಲದೆ ಭಕ್ತಾದಿಗಳು ಪಡುತ್ತಿರುವ ತೊಂದರೆಯನ್ನ ನಿವಾರಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯದ ಪ್ರಮುಖ 12 ದೇವಾಲಯಗಳಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ “ಸ್ವಚ್ಚ ಮಂದಿರ ಅಭಿಯಾನ”ದ ಅಡಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಫೆಬ್ರವರಿ 10 ರಂದು ಶಶಿಕಲಾ ಜೊಲ್ಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ತ್ಯಾಜ್ಯ ನಿರ್ವಹಣೆ ಘಟಕವನ್ನು ಉದ್ಘಾಟಿಸಿ ನಂತರ ವೀಡಿಯೋ ಕಾನ್ಫರೆನ್ಸ್ ಮೂಲಕ ಉಳಿದ 11 ದೇವಸ್ಥಾನಗಳ ಘಟಕಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Minister Shashikala Jolle to launch Swachh Mandira Abhiyan 1

ಸ್ವಚ್ಚ ಮಂದಿರ ಅಭಿಯಾನದ ಮೂಲಕ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಸವಾಲುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರಗಳನ್ನು ಒದಗಿಸಲಾಗುವುದು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮಗಳನ್ನು ಹುಟ್ಟುಹಾಕುವುದು ಮತ್ತು ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳೊಂದಿಗೆ ಮೂಲದಲ್ಲಿ ತ್ಯಾಜ್ಯವನ್ನು ಪ್ರತ್ಯೇಕಿಸುವುದು. ಮತ್ತು ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ “ಸ್ವಚ್ಛ ಮಂದಿರ ಅಭಿಯಾನ” ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 12 ದೇವಸ್ಥಾನಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ದೇವಸ್ಥಾನಗಳಲ್ಲಿ ಅಳವಡಿಸಲಾಗುವುದು. ಈ ಸೌಲಭ್ಯದಿಂದಾಗಿ ಪ್ರತಿದಿನ ಈ ದೇವಸ್ಥಾನಗಳಲ್ಲಿ ಉತ್ಪತ್ತಿಯಾಗುವ ಸುಮಾರು 3500 ರಿಂದ 12 ಸಾವಿರ ಕೆಜಿಗಳಷ್ಟು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಲಿದೆ. ಭಕ್ತಾದಿಗಳಿಗೆ ಸ್ವಚ್ಚ, ಸುಂದರ ಹಾಗೂ ನೈರ್ಮಲ್ಯದ ವಾತಾವರಣ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

belur chennakeshava swamy temple

ಮೊದಲ ಹಂತದಲ್ಲಿ ಉದ್ಘಾಟನೆಯಾಗುವ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಹೊಂದಿರುವ ದೇವಸ್ಥಾನಗಳ ಪಟ್ಟಿ
1. ಶ್ರೀ ನಿಮಿಷಾಂಭ ದೇವಾಲಯ, ಗಂಜಾಂ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
2. ಶ್ರೀ ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ
3. ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ
4. ಶ್ರೀ ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ
5. ಶ್ರೀ ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ
6. ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ
7. ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
8. ಶ್ರೀ ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ
9. ಶ್ರೀ ದುರ್ಗಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ
10. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ
11. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲ
12. ಶ್ರೀ ಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *