ವಿಜಯಪುರ: ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ (Shivanand Patil) ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ್ (84) (Gangabai Siddaramappa Patil) ಅವರು ವಯೋಸಹಜವಾಗಿ ಇಂದು (ಫೆ.22) ನಸುಕಿನಜಾವ ನಿಧರಾಗಿದ್ದಾರೆ.
ಮೃತರು, ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಇಂದು ಸಂಜೆ 4:30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿವೆ.

