ಬೆಂಗಳೂರು: ನಟ ದರ್ಶನ್ (Actor Darshan) ತಪ್ಪು ಮಾಡಿದ್ದರೆ ಶಿಕ್ಷೆ ಆಗುವುದು ಖಚಿತ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ.
ದರ್ಶನ್ ಕೊಲೆ ಕೇಸ್ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಸಿದ ಅವರು, ಎಷ್ಟೇ ದೊಡ್ಡವರಾದರೂ ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರದಿಂದ ಯಾರನ್ನೂ ಕಾಪಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಬಳಿ 70 ಲಕ್ಷ ರೂ. ಪತ್ತೆ – ʻದಾಸʼನಿಗೆ ಕೊಲೆ ಆರೋಪದ ಜೊತೆಗೆ ಐಟಿ ಸಂಕಷ್ಟ!
ಸಣ್ಣ ಸಣ್ಣ ವಿಚಾರಕ್ಕೆ ಜೀವ ತೆಗೆಯುವ ಕೆಲಸ ಮಾಡಬಾರದು. ಇದು ಸರಿಯಲ್ಲ. ದರ್ಶನ್ ತಪ್ಪು ಮಾಡಿದ್ರೆ ಅವರು ಅನುಭವಿಸುತ್ತಾರೆ. ಇದರಲ್ಲಿ ನಾವು ರಕ್ಷಣೆ ಮಾಡುವ ಕೆಲಸ ಮಾಡುವುದಿಲ್ಲ. ಪ್ರಕರಣದ ತನಿಖೆ ಆಗುತ್ತಿದೆ. ಕಾನೂನು ಪ್ರಕಾರ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!