ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಹೊರ ವಲಯದ ಫ್ಯಾಕ್ಟರಿವೊಂದರಲ್ಲಿ ಸಿದ್ಧಗೊಳ್ಳುತ್ತಿರುವ ನಾಡದೇವಿ ಭುವನೇಶ್ವರಿ ಪ್ರತಿಮೆಯ (Bhuvaneshwari Statue) ಸ್ಥಳಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನ.1ಕ್ಕೆ ನಾಡದೇವಿಯ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಬಾಗಲಗುಂಟೆಯಲ್ಲಿರುವ ಶಿಲ್ಪಿ ಕೆ. ಶ್ರೀಧರಮೂರ್ತಿ ಅವರ ಫ್ಯಾಕ್ಟರಿಗೆ ಸಚಿವರು ಭೇಟಿ ನೀಡಿ ಮಾಹಿತಿ ಪಡೆದರು. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!
Advertisement
Advertisement
ಮೊದಲು ಸಿಮೆಂಟಿನಲ್ಲಿ ಪ್ರತಿಮೆ ನಿರ್ಮಿಸಿ ನಂತರ ಫೈಬರ್ ಗ್ಲಾಸ್‌ನಲ್ಲಿ ಅಚ್ಚು ತೆಗೆದು ಕಂಚಿನಲ್ಲಿ ಎರಕ ಹಾಕಲಾಗುತ್ತದೆ. ಈಗಾಗಲೇ ಸಿಮೆಂಟ್‌ನಲ್ಲಿ ಪ್ರತಿಮೆ ನಿರ್ಮಿಸಲಾಗಿದ್ದು, ಅಂದಾಜು 45 ದಿನಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಸಚಿವರಿಗೆ ಶಿಲ್ಪಿ ಶ್ರೀಧರಮೂರ್ತಿ ತಿಳಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 12,690 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಸಂಪುಟ ಸಭೆ ಅಸ್ತು
Advertisement
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿವೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸೂಚನೆ
Advertisement
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅದರಂತೆ ವಿಕಾಸಸೌಧದ ಆವರಣದಲ್ಲಿ ಕನ್ನಡಾಂಬೆಯ ಪ್ರತಿಮೆಯನ್ನು ನಿರ್ಮಿಸಲು ಸಚಿವ ಶಿವರಾಜ ತಂಗಡಗಿ ಅವರು ಪಣತೊಟ್ಟಿದ್ದರು. ಕಳೆದ ಒಂದೂವರೆ ತಿಂಗಳ ಹಿಂದೆ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಇದನ್ನೂ ಓದಿ: POCSO Case | ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ; ಆ.30ರವರೆಗೆ ಮದ್ಯಂತರ ಆದೇಶ ಮುಂದುವರಿಕೆ