ಉಡುಪಿ: ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿತ್ತು. ಇದೀಗ ಈ ಸುದ್ದಿಗೆ ಸಚಿವೆ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
Advertisement
ಶೋಭಾ ಕರಂದ್ಲಾಜೆ ಹೆಸರು ಬದಲಿಸುವ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ ಎಂದು ಗರಂ ಆದರು.
Advertisement
Advertisement
ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು. ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು (Name Change) ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೆಸರು ಬದಲಾವಣೆಗೆ ಮುಂದಾದ ಶೋಭಾ ಕರಂದ್ಲಾಜೆ – ಏನಿದು ಹೊಸ ವರಸೆ?
Advertisement
ಹೆಸರು ಬದಲಾವಣೆ: ಬಿಜೆಪಿ (BJP) ಯಲ್ಲಿ ಒಂದು ವರ್ಗದ ಪ್ರಕಾರ 2023ರ ಚುನಾವಣೆ (Election)ಗೆ ತಯಾರಿ ನಡೆಸಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಅವರು ಶೋಭಾ ಗೌಡ (Shobha Gowda) ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.