ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಶೇಕಡ 7.5 ಮೀಸಲಾತಿ ನೀಡಬೇಕು. ಅದು ಆಗದಿದ್ದರೇ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಸಚಿವ ಬಿ.ಶ್ರೀರಾಮುಲು ನೀಡಿದ್ದಾರೆ. ಸಚಿವರ ಜೊತೆ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಸಹ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತಾನಾಡಿದ ಶ್ರೀಗಳು, ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ತಿಂಗಳಲ್ಲಿ ವರದಿ ನೀಡಬೇಕು ಎಂದು ಕೇಳಿಕೊಂಡಿದ್ದೇವೆ. ಈ ವಿಚಾರವಾಗಿ ಇದೇ ಹತ್ತರೊಳಗೆ ವಾಲ್ಮೀಕಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿ ಮೀಸಲಾತಿ ಬಗ್ಗೆ ಚರ್ಚೆ ಮಾಡಲಾಗುವುದು. ಶ್ರೀಗಳ ಒಂದು ಮಾತು ಹೇಳಿದ್ರೆ ರಾಗಿಕಾಳಿನಷ್ಟು ನಾವು ಮಾತನ್ನ ತಗೆದು ಹಾಕಲ್ಲ. ಯಾವುದೇ ತ್ಯಾಗಕ್ಕೆ ಸಿದ್ದ ಎಂದು ಶ್ರೀರಾಮುಲು ಪರೋಕ್ಷವಾಗಿ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಾವು ಹೇಳುವುದು ಪಕ್ಷದಲ್ಲಿ ನಡೆಯುವುದಿಲ್ಲ, ನಾನು ಅಸಹಾಯಕ – ಶ್ರೀರಾಮುಲು
Advertisement
Advertisement
ಇದೇ ಸಂದರ್ಭದಲ್ಲಿ ಮಾತನಾಡಿದ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಶ್ರೀಗಳು, ರಾಜ್ಯದಲ್ಲಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಸಂಘಟನೆಯಾಗಿದೆ. ಮಠದ ಆವರಣದಲ್ಲಿ ಎರಡನೇ ವರ್ಷದ ವಾಲ್ಮೀಕಿ ಜಾತ್ರೆಯನ್ನು ಮಾಡಲು ನಿರ್ಧರಿಸಿದ್ದೇವೆ. ವಾಲ್ಮೀಕಿ ಜಾತ್ರೆಯ ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ವಹಿಸಿಕೊಂಡಿದ್ದು, ಈ ವಾಲ್ಮೀಕಿ ಜಾತ್ರೆಯೊಳಗೆ ಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕು. ಮುಖ್ಯಮಂತ್ರಿಗಳ ಬಗ್ಗೆ ಅಪಾರವಾದ ನಂಬಿಕೆ ಇದೆ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎನ್ನುವ ಭರವಸೆ ಇದೆ. ವಾಲ್ಮೀಕಿ ಜಾತ್ರೆಯೊಳಗೆ ಏನಾದ್ರು ಮೀಸಲಾತಿ ಬಿಡುಗಡೆ ಮಾಡಲಿಲ್ಲ ಎಂದರೆ ಹತ್ತನೇ ತಾರೀಖು ನಂತರ ಎಲ್ಲಾ ಪಕ್ಷದ ವಾಲ್ಮೀಕಿ ಸಮಾಜದ ಶಾಸಕರ, ಸಚಿವರ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ನಿರ್ಧಾರ ಅತ್ಯಂತ ಕಠೋರವಾಗಿರುತ್ತೆ ಎಂದು ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಶ್ರೀಗಳು ಖಡಕ್ ಎಚ್ಚರಿಸಿದರು.