ಯಾದಗಿರಿ: ರಾಮುಲು ಸರ್ಕಾರದಲ್ಲಿ ಡಿಸಿಎಂ ಆಗಬೇಕೆನ್ನುವುದು ಜನರ ಒತ್ತಾಯ. ನಾನು ಅದನ್ನು ತಿರಸ್ಕರಿಸುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಡಿಸಿಎಂ ನೀಡಬೇಕು ಎನ್ನುವುದು ಜನರ ಅಪೇಕ್ಷೆಯಾಗಿದ್ದು, ಜನರ ಮಾತನ್ನು ಸರ್ಕಾರ ಕೇಳುತ್ತದೆ ಎಂಬ ನಂಬಿಕೆಯಿದೆ. ಸೂಕ್ತ ಸಮಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಡಿಸಿಎಂ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ ಎಂದರು.
Advertisement
Advertisement
ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಿಎಂ ಬಿಎಸ್‍ವೈ ನೂರಕ್ಕೆನೂರು 7.5 ಮೀಸಲಾತಿ ಕೊಟ್ಟೇ ಕೊಡುತ್ತಾರೆ. ಮೀಸಲಾತಿ ಕೊಡದಿದ್ದರೆ ಶ್ರೀಗಳ ಮಾತಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ. ಸ್ವಾಮೀಜಿಗಳ ಮಾತನ್ನು ಯಾವುದೇ ಕಾರಣಕ್ಕೂ ನಾವು ಮೀರುವುದಿಲ್ಲ. 7.5 ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ, ಮೀಸಲಾತಿ ಘೋಷಣೆಗೆ ಯಾವುದೇ ದಿನಾಂಕ ನಿಗದಿಯಾಗಿಲ್ಲ ಸರ್ಕಾರದ ನಡೆಯನ್ನು ಕಾದು ನೋಡುತ್ತೇವೆ ಎಂದು ತಿಳಿಸಿದರು.