– ಹೆಲಿಪ್ಯಾಡ್ ನಿರ್ಮಾಣ ಸ್ಥಳ, ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ
ಚಾಮರಾಜನಗರ: ಅ.7ರಂದು ಜಿಲ್ಲೆಗೆ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಬಿಳಿಗಿರಿರಂಗನಬೆಟ್ಟ ಹಾಗೂ ಬೆಟ್ಟದ ಹೊರವಲಯದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
ರಸ್ತೆ, ಹೆಲಿಪ್ಯಾಡ್ ನಿರ್ಮಾಣ, ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಕೈಗೊಳ್ಳುತ್ತಿರುವ ಸಿದ್ಧತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯಾವುದೇ ರೀತಿಯಲ್ಲೂ ಲೋಪವಾಗದಂತೆ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಸಿದ್ದರಾಮಯ್ಯಗೆ ಪೂರ್ಣ ಹುಚ್ಚು ಹಿಡಿದಿದೆ: ಈಶ್ವರಪ್ಪ
Advertisement
Advertisement
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಸಿದ್ಧತೆ ಕಾರ್ಯಗಳನ್ನು ಪರಿಶೀಲನೆ ನಡೆಸಿ, ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಲಾಗಿದೆ ಎಂದರು. ಇದನ್ನೂ ಓದಿ: ಪಿತೃಪಕ್ಷದಲ್ಲಿ ಥಿಯೇಟರ್ ಓಪನ್ ಮಾಡಲ್ಲ – ಉಡುಪಿ ಚಿತ್ರಮಂದಿರ ಮಾಲೀಕರ ತೀರ್ಮಾನ
Advertisement
ರಾಷ್ಟ್ರಪತಿಗಳ ಭೇಟಿ ವೇಳೆ ಎಲ್ಲೂ ಲೋಪವಾಗದ ರೀತಿಯಲ್ಲಿ ಕ್ರಮವಹಿಸಲಾಗುವುದು. ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ದಸರಾಗೆ 6ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎನ್.ಮಹೇಶ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಸಾರಿ ಮಮ್ಮಿ, ಪಪ್ಪಾ – ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ: ಸೌಜನ್ಯ ಡೆತ್‍ನೋಟ್