ಚಿಕ್ಕಬಳ್ಳಾಪುರ: ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದ ಸೈಕೋಪಾತ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಗಾಯಗೊಂಡ 6 ಮಂದಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಭರವಸೆ ನೀಡಿದ್ದಾರೆ ಮತ್ತು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು, ತಡರಾತ್ರಿ 3 ಗಂಟೆ ಹೊತ್ತಿಗೆ ಬಂಧಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು
Advertisement
ಚಿಕ್ಕಬಳ್ಳಾಪುರ ನಗರದಲ್ಲಿ ನೆನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು ತಡರಾತ್ರಿ 3ಗಂಟೆ ಹೊತ್ತಿಗೆ ಬಂಧಿಸಲಾಗಿದೆ.
ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
1/2
— Dr Sudhakar K (@mla_sudhakar) August 1, 2022
Advertisement
6 ಜನ ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದು ಅವರ ಚಿಕಿತ್ಸಾ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ವಹಿಸಲು ನಿರ್ಧರಿಸಿದ್ದೇನೆ. ದುಷ್ಕರ್ಮಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಲು ರಾತ್ರಿಯಿಡೀ ಶ್ರಮಿಸಿದ ಎಸ್‍ಪಿ ನಾಗೇಶ್, ಡಿವೈಎಸ್‍ಪಿ ವಾಸುದೇವ್, ಸರ್ಕಲ್ ಇನ್ಸ್‌ಪೆಕ್ಟರ್ ರಾಜು ಮತ್ತು ಎಲ್ಲ ಪೊಲೀಸ್ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.
Advertisement
ಏನಿದು ಪ್ರಕರಣ?
ಚಿಕ್ಕಬಳ್ಳಾಪುರ ನಗರದ ನಿವಾಸಿ ಅರ್ಜುನ್ ನಗರದ ಬಲಮುರಿ ವೃತ್ತ ಬಜಾರ್ ರಸ್ತೆಯಲ್ಲಿ ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದನು. ಇದೀಗ ಸೈಕೋಪಾತ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್
ಅರ್ಜುನ್ ಕಂದವಾರದ ಬಳಿಯ ದೇವಸ್ಥಾನವೊಂದರಲ್ಲಿ ಮಲಗುತ್ತಿದ್ದು, ಕಳೆದ 3 ದಿನಗಳ ಹಿಂದೆ ಪಕ್ಕದಲ್ಲಿ ಮಲಗಿದ್ದ ಒಬ್ಬನ ಬಳಿ ಮೊಬೈಲ್ ಕಳವು ಮಾಡಿದ್ದ ಎನ್ನಲಾಗಿದೆ. ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮೊಬೈಲ್ ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿದ್ದು, ತದನಂತರ ಮೊಬೈಲ್ ಮಾಲೀಕ ನಾಲ್ವರ ಸ್ನೇಹಿತರ ಜೊತೆ ಹೋಗಿ ಅರ್ಜುನ್‍ಗೆ ಹಲ್ಲೆ ಮಾಡಿ ಬೆದರಿಸಿ ಮೊಬೈಲ್ ವಾಪಸ್ ಪಡೆದುಕೊಂಡಿದ್ರಂತೆ. ಇದೇ ವಿಚಾರದಲ್ಲಿ ನಿನ್ನೆಯೂ ಸಹ ಜೂನಿಯರ್ ಕಾಲೇಜು ಬಳಿ ಗಲಾಟೆ ನಡೆದಿದ್ದು, ಅರ್ಜುನ್ ಗಲಾಟೆ ನಂತರ ಜೂನಿಯರ್ ಕಾಲೇಜು ಕಡೆಯಿಂದ ಬಲಮುರಿ ವೃತ್ತದ ಮೂಲಕ ಬಜಾರ್ ರಸ್ತೆಗೆ ಬೈಕ್ ಮೂಲಕ ಬಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಸೇರಿ 6 ಮಂದಿ ಆಸ್ಪತ್ರೆ ಪಾಲಾಗಿದ್ದು, ಘಟನೆಯಿಂದ ಚಿಕ್ಕಬಳ್ಳಾಪುರ ನಗರದ ಜನತೆ ಬೆಚ್ಚಿಬಿದ್ದಿದ್ದರು.