ಬೆಂಗಳೂರು: ಕನ್ನಡ ರಂಗಭೂಮಿಯ ಪ್ರತಿಭಾನ್ವಿತ ನಟ, ಚಿಂತಕ ಪ್ರೊ. ಜಿ.ಕೆ. ಗೋವಿಂದರಾವ್ ಅವರ ನಿಧನಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿ.ಕೆ ಗೋವಿಂದರಾವ್ ಕನ್ನಡ ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಬಹಳ ದೊಡ್ಡದು. ಸಮುದಾಯ ತಂಡದ ಸಕ್ರಿಯ ಸದಸ್ಯರಾಗಿದ್ದ ಜಿ.ಕೆ ಗೋವಿಂದರಾವ್ ಹೊಸ ಅಲೆಯ ಸಿನಿಮಾಗಳ ಮೂಲಕ ತಮ್ಮನ್ನು ಗುರುತಿಸಿಕೊಂಡರು.
Advertisement
Advertisement
ಹವ್ಯಾಸಿ ರಂಗ ತಂಡಗಳ ಬೆಳವಣಿಗೆಗೆ ಅವರ ಕೊಡುಗೆ ಮಹತ್ವದ್ದು. ಅಧ್ಯಾಪಕರಾಗಿಯೂ ಅವರು ದೊಡ್ಡ ಶಿಷ್ಯವೃಂದ ಹೊಂದಿದ್ದವರು. ಸಿನಿಮಾ ನಾಟಕ ಕಿರುತೆರೆ ಹೀಗೆ ಎಲ್ಲ ಪ್ರಕಾರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದ ಜಿ.ಕೆ ಗೋವಿಂದರಾವ್ ನಿಧನ ದಿಂದ ಕನ್ನಡ ಸಾಂಸ್ಕೃತಿಕ ಲೋಕ ಒಬ್ಬ ಪ್ರಖರ ಪ್ರತಿಭೆಯ ರಂಗಕರ್ಮಿ ಹಾಗೂ ಚಿಂತಕನನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!
Advertisement
Advertisement
ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಇಂದು ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಜಿ.ಕೆ. ಗೋವಿಂದ ರಾವ್ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.
ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು.